ಕೆ.ಆರ್.ನಗರ: ಭಾರತೀಯ ಜನತಾ ಪಾರ್ಟಿಯಿಂದ ಮಾ.3ರಂದು ಕೆ.ಆರ್.ನಗರ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದ್ದು, ಕ್ಷೇತ್ರದ ಮತದಾರರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಮಹದೇವಯ್ಯ ಮನವಿ ಮಾಡಿದರು.
ಅಂದು ಬೆಳಗ್ಗೆ 9.30 ಕ್ಕೆ ಪಟ್ಟಣಕ್ಕೆ ಯಾತ್ರೆ ಆಗಮಿಸಲಿದೆ. ಬಳಿಕ ಮೈಸೂರು ರಸ್ತೆಯ ಶ್ರೀ ತೋಪಮ್ಮ ತಾಯಿ ದೇವಸ್ಥಾನದಿಂದ ಮೆರವಣಿಗೆ ಹೊರಡಲಿದ್ದು, ಬಜಾರ್, ವಾಣಿವಿಲಾಸ ರಸ್ತೆ ಮೂಲಕ ಪುರಸಭೆ ವೃತ್ತದ ಬಳಿವರೆಗೆ ಯಾತ್ರೆ ಸಾಗಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಚಿವರಾದ ಕೆ.ಸಿ.ನಾರಾಯಣಗೌಡ, ಕೆ.ಗೋಪಾಲಯ್ಯ, ವಿ.ಸೋಮಣ್ಣ, ಆರಗ ಜ್ಞಾನೇಂದ್ರ, ಶಾಸಕ ಕೆ.ಎಸ್.ಈಶ್ವರಪ್ಪ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಉದ್ದೇಶದಿಂದ ಯಾತ್ರೆ ಮಾಡುತ್ತಿದ್ದು, ಈ ಬಾರಿ ಗೆಲುವು ಸಾಧಿಸುವ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದರು.
ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್, ಜಿಲ್ಲಾ ಮಾಧ್ಯಮ ಪ್ರಮುಖ ಎಚ್.ಪಿ.ಗೋಪಾಲ್, ತಾಲೂಕು ಅಧ್ಯಕ್ಷ ಕೆ.ವೈ.ಮಂಜು, ಪ್ರಧಾನ ಕಾರ್ಯದರ್ಶಿಗಳಾದ ಅನಿಲ್‌ಗೌಡ, ಮಾರ್ಕಂಡಯ್ಯ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಪ್ರಭಾಕರ್ ಜೈನ್, ನಗರಾಧ್ಯಕ್ಷ ಚಿರಾಗ್ ಪಟೇಲ್, ಇತರರು ಸುದ್ದಿಗೋಷ್ಠಿಯಲ್ಲಿದ್ದರು.