ಚಾಮರಾಜನಗರ : ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿಶ್ ಷಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಡಿ.31ರ ಮಂಗಳವಾರ ಕರೆ ನೀಡಿರುವ ಚಾಮರಾಜನಗರ ಬಂದ್‌ಗೆ ಅಹಿಂದ ಸಂಘಟನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷ ಹಳೇಪುರ ಮಹೇಶ್ ಘೋಷಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಅಹಿಂದ ಸಂಘಟನೆ ವತಿಯಿಂದ ಭಾನುವಾರ ಆಯೋಜಿಸಿದ್ದ ಚಾಮರಾಜನಗರ ಬಂದ್ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಶ್ವಕ್ಕೆ ಶ್ರೇಷ್ಠ ಸಂವಿಧಾನ ಬರೆದು ಕೊಡುವ ಮೂಲಕ ಭಾರತದ ವಾಸಿಸುವ ಸರ್ವರಿಗೂ ಸಮಾನ ಅವಕಾಶ ಕೊಟ್ಟಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅಮಿಶ್ ಷಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಅವರ ಕರೆ ನೀಡಿರುವ ಚಾಮರಾಜನಗರ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.
ಅಂಬೇಡ್ಕರ್ ಅವರು ಸಂವಿಧಾನದಡಿಯಲ್ಲಿ ಕೊಟ್ಟಿರುವ ಮೀಸಲಾತಿ ಋಣದಲ್ಲಿ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಗೃಹ ಸಚಿವರಾಗಿ ಅಮಿತ್ ಷಾ ಸಚಿವರಾಗಿ, ಸಂಸದರಾಗಿ ಮುಂದುವರಿಯುವ ಯಾವುದೇ ನೈತಿಕತೆ ಇಲ್ಲ. ಹೀಗಾಗಿ ತತ್‌ಕ್ಷಣವೇ ರಾಜೀನಾಮೆ ನೀಡಬೇಕು. ಅಂಬೇಡ್ಕರ್ ಅವರ ಬಗ್ಗೆ ಬಿಜೆಪಿಗೆ ಗೌರವ ಇದ್ದರೆ ಅಮಿತ್ ಷಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಸಭೆಯಲ್ಲಿ ಮಹಿಳಾ ಘಟಕ ರಾಜ್ಯ ಉಪಾಧ್ಯಕ್ಷೆ ಕಾವೇರಿ ಶಿವಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ರಾಜ್ಕುಮಾರ್, ಯಳಂದೂರು ತಾಲೂಕು ಅಧ್ಯಕ್ಷ ಶ್ರೀನಿವಾಸ ಗಣಿಗನೂರು, ರವಿಕುಮಾರ್, ಜಿಲ್ಲಾ ಉಪಾಧ್ಯಕ್ಷ ಹೊನ್ನಹಳ್ಳಿ ಬಸವಣ್ಣ, ಬಿ.ರವಿ, ರೇಚಂಬಳ್ಳಿ ಮಧು, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಭಾಗ್ಯಾ, ರತ್ನಮ್ಮ, ಕೋಮಲಾ, ದುಂಡಮ್ಮ, ರೇಖಾನಾಯಕ್ ಇತರರಿದ್ದರು.
ಬಂದ್‌ಗೆ ಶಾಸಕರ ಬೆಂಬಲ ೋಷಣೆ:
ಚಾಮರಾಜನಗರದಲ್ಲಿ ವಿವಿಧ ಸಂಘಟನೆಗಳು ಡಿ.31ರಂದು ಹಮ್ಮಿಕೊಂಡಿರುವ ಬಂದ್‌ಗೆ ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಸಂಪೂರ್ಣ ಬೆಂಬಲ ೋಷಣೆ ಮಾಡಿದ್ದಾರೆ.