ಜಿಲ್ಲೆ

ನಾಳೆ ಬಸವೇಶ್ವರ ಜಯಂತಿ ಮಹೋತ್ಸವ

ಕೊಳ್ಳೇಗಾಲ: ಕೊಳ್ಳೇಗಾಲದಲ್ಲಿ ಮೇ 31ರಂದು ನಡೆಯುವ ಶ್ರೀ ಬಸವೇಶ್ವರ ಜಯಂತಿ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಅಖಿಲ ಭಾರತ ವೀರ ಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಪುಟ್ಟಣ್ಣ ಹೇಳಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಳ್ಳೇಗಾಲ ಘಟಕ, ಶ್ರೀ ಬಸವ ಜಯಂತಿ ಮಹೋತ್ಸವ ಸಮಿತಿ ಮತ್ತು ತಾಲೂಕು ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳ ಒಕ್ಕೂಟದ ಸಹಯೋಗದಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿ ತಿಳಿಸಿದರು.

ಎಂಜಿಎಸ್‌ವಿ ಕಾಲೇಜು ಆವರಣದಲ್ಲಿ ಚಿನ್ನದ ರಥದ ಮೇಲೆ ಇರಿಸಲಾಗಿದ್ದ ಶ್ರೀ ಬಸವೇಶ್ವರ ಉತ್ಸವಕ್ಕೆ ಬೆಳಗ್ಗೆ 9 ಗಂಟೆಗೆ ಶ್ರೀ ಸುತ್ತೂರು ವೀರ ಸಿಂಹಾಸನ ಮಠಾಧ್ಯಕ್ಷ ಶ್ರೀ ಡಾ.ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಚಾಲನೆ ನೀಡುವರು. ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಶ್ರೀ ಡಾ.ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನಂದಿಧ್ವಜ ಪೂಜೆ ನೆರವೇರಿಸಲಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಳ್ಳೇಗಾಲ ತಾಕೂಕು ಘಟಕ ಗೌರವಾಧ್ಯಕ್ಷ ಶ್ರೂ ಮಲ್ಲಿಕಾರ್ಜುನ ಸ್ವಾಮೀಜಿ ಉಪಸ್ಥಿತರಿರುವರು. ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಪ್ರಮುಖ ರಸ್ತೆಯ ಮೂಲಕ ಉತ್ಸವ ಜೆಎಸ್‌ಎಸ್ ಮಹಿಳಾ ಕಾಲೇಜು ಆವರಣ ತಲುಪಲಿದೆ. ನಂತರ ಪ್ರಸಾದ ವಿನಿಯೋಗ ಆಗಲಿದೆ. ಈ ಅದ್ದೂರಿ ಕಾರ್ಯಕ್ರಮಕ್ಕೆ ಕೊಳ್ಳೇಗಾಲ ಹಾಗೂ ಹನೂರು ತಾಲೂಕಿನ ಎಲ್ಲ ಸ್ವಾಮೀಜಿಗಳು ಹಾಗೂ ಹರಗುರುಚರ ಮೂರ್ತಿಗಳು, ಚುನಾಯಿತ ಪ್ರತಿನಿಧಿಗಳು, ರಾಜಕೀಯ ಮುಖಂಡರು ಹಾಗೂ ವೀರಶೈವ ಲಿಂಗಾಯತ ಸಮಾಜದ ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಅಖಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ನಂದೀಶ್ ಮೂಡ್ಲಪುರ, ತಾಲೂಕು ಅಧ್ಯಕ್ಷ ಪುಟ್ಟಣ್ಣ, ಉಪಾಧ್ಯಕ್ಷ ರಾಜು ತಿಮ್ಮರಾಜುಪುರ, ಮಾಜಿ ಅಧ್ಯಕ್ಷ ಬಸವರಾಜು ಬಸಪ್ಪನದೊಡ್ಡಿ, ಮಹದೇವ ಪ್ರಸಾದ್, ನಿರ್ದೇಶಕ ಯುಪಿಎಸ್ ಮಹದೇವಸ್ವಾಮಿ, ಬಸವರಾಜು, ಮಂಜು ಇತರರು ಇದ್ದರು.