ಜಿಲ್ಲೆ

ನಾಳೆ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮ

ಹಾಸನ: ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮವನ್ನು ಆ.12ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ನಗರದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಮಹಾಮಂಗಳಾರತಿ ನಂತರ ಭಕ್ತರಿಗೆ ಮಧ್ಯಾಹ್ನದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಸನ ತಾಲೂಕು ಘಟಕದ ನಿರ್ದೇಶಕರು, ಜಿಲ್ಲಾ ನಿರ್ದೇಶಕರು, ಜಿಲ್ಲಾ ಅಧ್ಯಕ್ಷರು ಮತ್ತು ಮಹಾಸಭಾದ ಎಲ್ಲ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸಾರ್ವಜನಿಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.