ಜಿಲ್ಲೆ

ನಿಗಮದ ಹಣ ದುರುಪಯೋಗ ಕ್ರಮಕ್ಕೆ ಆಗ್ರಹ

ಕಕ್ಕೇರಾ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಮಾಡಿಕೊಂಡ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಮಹರ್ಷಿ ವಾಲ್ಮೀಕಿ ನಾಯಕ ಸಂಘ ಹಾಗೂ ಜಿಲ್ಲಾ ಪರಿಶಿಷ್ಟ ಪಂಗದ ಜನಜಾತಿ ಸುರಕ್ಷಾ ವೇದಿಕೆ ಆಗ್ರಹಿಸಿದೆ. ರಾಜ್ಯದಲ್ಲಿ ಎಸ್ಟಿಯ ೫೨ ಜನಜಾತಿ ತೀರಾ ಕಡು ಬಡತನದಲ್ಲಿ ಜೀವನ ಸಾಗಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಇಂಥ ಸ್ಥಿತಿಯಲ್ಲಿ ಈ ಜನರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ ಅವರ ಅಭಿವೃದ್ಧಿಗಾಗಿ ಹಣ ಖರ್ಚು ಮಾಡುವುದು ನಿಗಮದ ಮೂಲ ಉದ್ದೇಶವಅಗಿದೆ. ಹೀಗಿದ್ದಲ್ಲಿ ೧೮೭ ಕೋಟಿ ರೂ.ಅವ್ಯವಹಾರ ಹೇಗಾಯಿತು. ನಿಗಮದ ಅಧೀಕ್ಷಕರ ಆತ್ಮಹತ್ಯೆಗೆ ಮೂಲ ಕಾರಣವೇನು? ಎಂಬುದರ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಅಲ್ಲದೆ ಈ ಅಕ್ರಮದಲ್ಲಿ ಭಾಗಿಯಾದವರಿಗೆ ಎಸ್ಟಿ ದೌರ್ಜನ್ಯದಡಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ತಾಲೂಕು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಗಂಗಾಧರನಾಯಕ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಜನಜಾತಿ ಸುರಕ್ಷಾ ವೇದಿಕೆ ಜಿಲ್ಲಾಧ್ಯಕ್ಷ ಕಾಶಪ್ಪ ದೊರೆ ಒತ್ತಾಯಿಸಿದ್ದಾರೆ.