ಹುಬ್ಬಳ್ಳಿ: ಕಿಮ್ಸ್ನಲ್ಲಿ ಮೇಲ್ದರ್ಜೆಗೇರಿಸಿದ ವೈರಾಲಜಿ ಪ್ರಯೋಗಾಲಯ ಕಾರ್ಯಾರಂಭಿಸಿದ್ದು, ಧಾರವಾಡ ಜಿಲ್ಲೆಯಲ್ಲಿ ನಿತ್ಯ ಸಾವಿರಕ್ಕೂ ಅಧಿಕ ಜನರ ತ್ವರಿತ ತಪಾಸಣೆ ಸಾಮರ್ಥ್ಯದ ಪ್ರಯೋಗಾಲಯಗಳಿವೆ. ಕೇಂದ್ರ ಮತ್ತು ಮಾರ್ಗಸೂಚಿ ಅನುಸಾರ ತಪಾಸಣೆ ಕಾರ್ಯ ಮುಂದುವರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ನಗರದ ಕಿಮ್ಸ್ನಲ್ಲಿ ಮೇಲ್ದರ್ಜೆಗೇರಿಸಿದ ವೈರಾಲಜಿ ಪ್ರಯೋಗಾಲಯವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ತಪಾಸಣೆಗೆ ಒಳಪಡಿಸಿದ 24 ಗಂಟೆಯೊಳಗೆ ವರದಿ ಪಡೆಯಲು ಸಾಧ್ಯವಾಗುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ ಮತ್ತು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೊಂದಿಗೆ ರ್ಚಚಿಸಿ ಜಿಲ್ಲೆಯಲ್ಲಿ ಹೆಚ್ಚು ಪ್ರಯೋಗಾಲಯ ಸ್ಥಾಪನೆ ಕುರಿತು ಮನವರಿಕೆ ಮಾಡಿಕೊಡಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಎನ್ಡಿಆರ್ಎಫ್ ಅನುದಾನದಲ್ಲಿ ಹೊಸ ಪ್ರಯೋಗಾಲಯ ಸ್ಥಾಪಿಸಲಾಗಿದೆ. ಕಿಮ್್ಸ, ಡಿಮ್ಹಾನ್ಸ್ ಹಾಗೂ ಎನ್ಎಂಆರ್ ಕೇಂದ್ರದಲ್ಲಿ ಪ್ರಯೋಗಾಲಯಗಳಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಲಕಾಲಕ್ಕೆ ನೀಡುವ ಮಾರ್ಗಸೂಚಿ ಮತ್ತು ನಿರ್ದೇಶನದಂತೆ ಕೋವಿಡ್ ತಪಾಸಣೆ ಮುಂದುವರಿಯಲಿದೆ ಎಂದರು. ಬ್ಯಾಂಕ್ ಆಫ್ ಬರೋಡಾ ನೀಡಿರುವ ಬ್ಯಾಟರಿ ಚಾಲಿತ ಆಂಬುಲೆನ್ಸ್ ಲೋಕಾರ್ಪಣೆ ಮಾಡಲಾಯಿತು. ಡಿಸಿ ದೀಪಾ ಚೋಳನ್, ಜಿಪಂ ಸಿಇಒ ಡಾ.ಬಿ.ಸಿ. ಸತೀಶ, ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಪ್ರಭಾರಿ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ ಸಿ., ಡಾ. ರಾಜಶೇಖರ ದ್ಯಾಬೇರಿ, ಡಾ. ಎಸ್.ವೈ. ಮುಲ್ಕಿಪಾಟೀಲ, ಡಾ. ಲಕ್ಷ್ಮೀಕಾಂತ ಲೋಕರೆ, ಡಾ. ಈಶ್ವರ ಹಸಬಿ, ಡಾ. ಆಶಾ ಪಾಟೀಲ, ಸಿಎಒ ರಾಜಶ್ರೀ ಜೈನಾಪೂರ, ಕರ್ನಾಟಕ ಡಿಎನ್ಎ ಸಂಶೋಧನೆ ಕೇಂದ್ರದ ನಿರ್ದೇಶಕ ಪೊ›. ಪ್ರಮೋದ ಗಾಯಿ ಇತರರು ಇದ್ದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮರ್ಪಕ ನಿರ್ವಹಣೆಗೆ ಸೂಚನೆ: ಕರೊನಾ ಹಾವಳಿ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಸಮರ್ಪಕವಾಗಿ ಆಯೋಜಿಸುವುದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಸವಾಲಾಗಿದೆ. ಪ್ರತಿಯೊಬ್ಬ ಅಧಿಕಾರಿ, ಶಿಕ್ಷಕರು ಮತ್ತು ಸಿಬ್ಬಂದಿ ವಿಶೇಷ ಎಚ್ಚರಿಕೆ ವಹಿಸಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 117 ಕೇಂದ್ರಗಳಲ್ಲಿ 27,841 ಮಕ್ಕಳಿಗೆ ಪರೀಕ್ಷೆಗಳನ್ನು ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಆಯೋಜಿಸಬೇಕು. ಜಿಲ್ಲೆಯ ಎಲ್ಲ ಬಿಇಒಗಳು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ಖುದ್ದಾಗಿ ಸಂರ್ಪಸಿ ಸಾರಿಗೆ ವ್ಯವಸ್ಥೆ ಖಚಿತಪಡಿಸಿಕೊಳ್ಳಬೇಕು. ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗಬಾರದು ಎಂದು ಸೂಚಿಸಿದರು. ಕೋವಿಡ್ ನಿಯಂತ್ರಣ, ಮೆಕ್ಕೆಜೋಳ ಬೆಳೆದ ರೈತರು, ಆಟೋ ಚಾಲಕರು, ಕಾರ್ವಿುಕರು, ಮೊದಲಾದ ವರ್ಗಗಳಿಗೆ ಪರಿಹಾರ ವಿತರಣೆ, ಕೈಗಾರಿಕೆಗಳ ಪುನರಾರಂಭ ಸೇರಿ ಮತ್ತಿತರ ವಿಷಯಗಳ ಕುರಿತು ರ್ಚಚಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.