ಜಿಲ್ಲೆ

ನಿರಂತರ ಪರಿಶ್ರಮದಿಂದ ಪ್ರತಿಫಲ ಸಾಧ್ಯ

ಚಿಕ್ಕೋಡಿ: ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಂಡು ಶ್ರದ್ಧೆಯಿಂದ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಬಿಬಿಎ, ಬಿಸಿಎ ವಿದ್ಯಾರ್ಥಿಗಳಿಗೆ ಕಾಲೇಜಿಗಿಂತಲೂ ಹೆಚ್ಚು ಉದ್ಯೋಗ ಸ್ಥಳದಲ್ಲಿ ಕಲಿಯಲು ಅವಕಾಶವಿದೆ ಎಂದು ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಪ್ರಸಾದ ರಾಂಪೂರೆ ಹೇಳಿದರು.

ಪಟ್ಟಣದ ಕೆಎಲ್‌ಇ ಸಂಸ್ಥೆಯ ಬಿಬಿಎ, ಬಿಸಿಎ ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಹಲವಾರು ಕಂಪನಿಗಳಲ್ಲಿ ಉದ್ಯೋಗ ಪಡೆದ ವಿದ್ಯಾರ್ಥಿಗಳು ಹಾಗೂ ಪಾಲಕರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗ ಪಡೆದುಕೊಂಡರಷ್ಟೇ ಸಾಲದು, ಕಠಿಣ ಪರಿಶ್ರಮದಿಂದ ಕೆಲಸ ಉಳಿಸಿಕೊಳ್ಳುವ ಹೊಣೆಗಾರಿಕೆಯೂ ಅವಶ್ಯ. ಹಾಗಾಗಿ ನಿರಂತರ ಪರಿಶ್ರಮದಿಂದ ಪ್ರತಿಫಲ ದೊರೆಯಲು ಸಾಧ್ಯ ಎಂದು ತಿಳಿಸಿದರು.

ಅಮರ ಪಶುಪತಿಮಠ ಮಾತನಾಡಿ, ಕಾಲೇಜಿನಲ್ಲಿ ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಪಡೆದುಕೊಂಡಿರುವುದು ಹೆಮ್ಮ ಸಂಗತಿ. ಆಸಕ್ತಿ ವಹಿಸಿ ಕೆಲಸ ಮಾಡಿದರೆ ಯಶಸ್ಸು ಸಾಧ್ಯ ಎಂದರು. ವಿವಿಧ ಕಂಪನಿಯಲ್ಲಿ ಉದ್ಯೋಗ ಪಡೆದುಕೊಂಡ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಸನ್ಮಾನಿಸಲಾಯಿತು.

ಕಿರಣ ತುಂಗಳ, ಸೋಮಶೇಖರ ಅಂಗಡಿ, ಅನಿತಾ ಗಾಡವಿ, ವೈಷ್ಣವಿ ಶಿಂತ್ರೆ, ಜಯಶ್ರೀ ಜೆ., ಸೃಜನಾ ಶೆಟ್ಟಿ, ಕಾವ್ಯ ಹೊಳೆನಾಯಕ, ಹೇಮಂತ ಬೆಳಗಲಿ ಇತರರಿದ್ದರು.