ಬಳ್ಳಾರಿ : ಇಲ್ಲಿನ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಹಾಗೂ ನಿವಾಸಿಗಳ ಯೋಗಕ್ಷೇಮ ಮತ್ತು ಆರೋಗ್ಯ ಊಟ ಉಪಚಾರದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದರು.
ಉತ್ತಮ ಗುಣಮಟ್ಟದ ಆಹಾರ ನೀಡಬೇಕು. ಸ್ನಾನಕ್ಕೆ ಬಿಸಿನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ನಿಮಗೆ ನೀಡಲಾಗುತ್ತದೆ ಎಂದು ಅಭಯ ನೀಡಿದರು. ಒಟ್ಟು 94 ಪುರುಷ ಹಾಗೂ 34 ಮಹಿಳಾ ನಿರಾಶ್ರಿತರಿದ್ದು, ಸುಮಾರು 128 ನಿರಾಶ್ರಿತರು ಊಟ ಮತ್ತು ಇನ್ನಿತರ ಸೌಲಭ್ಯದಿಂದ ವಂಚಿತರಾಗದಂತೆ ನಿಗಾವಹಿಸಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಏನಾದರೂ ಸಮಸ್ಯೆ ಕಂಡುಬಂದಲ್ಲಿ ಗಮನಕ್ಕೆ ತರಬೇಕು. ನಗರದ ವಿವಿಧಡೆ ಬಿಕ್ಷಾಟನೆ ಮಾಡುವವರು ಕಂಡು ಬಂದರೆ ಸಾರ್ವಜನಿಕರು ಇಲಾಖೆಯ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು. ಬಳಿಕ ವೃದ್ಧರಿಗೆ ಸಮವಸ್ತ್ರ ಹಾಗೂ ಹಾಸಿಗೆ ದಿಂಬು ಹೊದಿಕೆಗಳು ವಿತರಿಸಿದರು.