ಜಿಲ್ಲೆ

ನಿರ್ಮಿತಿ ಕೇಂದ್ರ ಪಿಡಿ,ಇಂಜಿನಿಯರ್‌ ಸೇವೆಯಿಂದ ವಿಮುಕ್ತಿಗೊಳಿಸಿ ಡಿಸಿ ಆದೇಶ

ಚಿತ್ರದುರ್ಗ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಹಾಗೂ ಇಂಜಿನಿಯರ್ ಸತೀಶ್ ಕಲ್ಲಹಟ್ಟಿ ಅವರನ್ನು ಸೇವೆಯಿಂದ ವಿಮುಕ್ತಿಗೊಳಿಸಿ ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾಪ್ರಭು ಅವರು ಶುಕ್ರವಾರ ಆದೇಶಿಸಿದ್ದಾರೆ.

ನಿರ್ಮಿತಿ ಕೇಂದ್ರದಿಂದ ಶುದ್ಧ ಕುಡಿವ ನೀರಿನ ಘಟಕಗಳ ಕಾಮಗಾರಿ ಪೂರ್ಣಗೊಳಿಸದೆ ಜಿಲ್ಲಾ ಖನಿಜಾ ಪ್ರತಿಷ್ಠಾನ ಹಣ ದುರ್ಬಳಕೆ ಆಗಿದೆ ಎಂದು ಮೊಳ ಕಾಲ್ಮೂರು ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು,ದಾಖಲೆಗಳನ್ನು ತಿದ್ದುವ,ನಾಶಪಡಿಸುವ,ಸಾಕ್ಷಾೃಧಾರಗಳನ್ನು ನಾಶ ಪಡಿಸುವ ಸಾಧ್ಯ ತೆಗಳ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಠಿಯಿಂದ ಇಬ್ಬರು ಸೇವೆಯಿಂದ ವಿಮುಕ್ತಿಗೊಳಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.