ಮಸ್ಕಿ: ಪಟ್ಟಣದ ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ವಸತಿ ನಿಲಯಕ್ಕೆ ಪರಿಶಿಷ್ಟ ಪಂಗಡದ ಜಿಲ್ಲಾ ಅಧಿಕಾರಿ ಶಿವಮಾನಪ್ಪ ಹಾಗೂ ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಮಂಗಳವಾರ ಭೇಟಿ ನೀಡಿ ವಸತಿ ನಿಲಯದ ವಿದ್ಯಾರ್ಥಿಗಳಿಂದ ಕೊಂದು ಕೊರತೆಗಳ ಬಗ್ಗೆ ವಿಚಾರಿಸಿದರು.
ವಸತಿ ನಿಲಯದಲ್ಲಿ ಶೌಚಗೃಹ ಸಮಸ್ಯೆ ಇದೆ. ಓದಲು ಸರಿಯಾದ ಗ್ರಂಥಾಲಯವಿಲ್ಲ. ಕಂಪ್ಯೂಟರ್ ಲ್ಯಾಬ್ ವ್ಯವಸ್ಥೆ ಕಲ್ಪಿಸಬೇಕೆಂದು ವಿದ್ಯಾರ್ಥಿಗಳು ಮನವಿ ಮಾಡಿದರು.
ಇದನ್ನೂ ಓದಿ : ಕೈಗಾರಿಕೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿ
ಮಕ್ಕಳಿಗೆ ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಾರ್ಡ್‌ನ ನಿಲಿಫರ್ ಬಾನುಗೆ ಅಧಿಕಾರಿಗಳು ಎಚ್ಚರಿಸಿದರು.
ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸರ್ಕಾರದಿಂದ ಬರುವ ಎಲ್ಲ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಕೊಡುವುದಾಗಿ ವಾರ್ಡನ ತಿಳಿಸಿದರು.
ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಮಾತನಾಡಿ, ವಿದ್ಯಾರ್ಥಿಗಳು ಸರಿಯಾಗಿ ಓದಿ ಜೀವನದಲ್ಲಿ ಸಾಧಿಸಬೇಕು ಎಂದು ಮಾರ್ಗದರ್ಶನ ನೀಡಿದರು. ಕಂದಾಯ ನಿರೀಕ್ಷಕ ಮಹಾಂತೇಶ, ಗ್ರಾಮ ಲೆಕ್ಕಿಗ ಗಂಗಪ್ಪ ಇದ್ದರು.