ಜಿಲ್ಲೆ

ನಿವೃತ್ತ ಅಂಗನವಾಡಿ ಕಾರ್ಯಕರ್ತೆಗೆ ಬೀಳ್ಕೊಡುಗೆ

ನಾಪೋಕ್ಲು: ನಿವೃತ್ತಿ ಹೊಂದಿದ ಸ್ಥಳೀಯ ಟೌನ್ ಅಂಗನವಾಡಿ ಕಾರ್ಯಕರ್ತೆ ಎಂ.ಪಿ.ಜ್ಯೋತಿ ಅವರನ್ನು ಗುರುವಾರ ಸನ್ಮಾನಿಸಿ ಬೀಳ್ಕೊಡಲಾಯಿತು.

ಅಂಗನವಾಡಿ ಕಾರ್ಯಕರ್ತೆಯಾಗಿ ಸುದೀರ್ಘ 36 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಎಂ.ಪಿ.ಜ್ಯೋತಿ ಅವರಿಗೆ ಬಲ್ಲಮಾವಟಿ ವೃತ್ತದ ವತಿಯಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಉತ್ತಮ ಅಂಗನವಾಡಿ ಕಾರ್ಯಕರ್ತೆ ಎಂದು ರಾಜ್ಯ ಪ್ರಶಸ್ತಿ ಪಡೆದ ಹಳೇ ತಾಲೂಕಿನ ಕಾರ್ಯಕರ್ತೆ ಭಾಗ್ಯವತಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶೀಲಾ ಬಲ್ಲಮಾವಟಿ ಹಾಗೂ ನಾಪೋಕ್ಲು ವೃತ್ತದ ಕಾರ್ಯಕರ್ತೆಯರು, ಸಹಾಯಕಿ ಹಾಗೂ ಪುಟಾಣಿ ಮಕ್ಕಳು ಭಾಗವಹಿಸಿದ್ದರು.