ಮೈಸೂರು: ದೀಪಾವಳಿ ಅಂಗವಾಗಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಕೆಲ ಪ್ರದೇಶಗಳನ್ನು ನಿಶಬ್ಧ ವಲಯ ಪ್ರದೇಶವೆಂದು ಘೋಷಿಸಿ ಆದೇಶ ಹೊರಡಿಸಿದ್ದು, ಅಂತಹ ಪ್ರದೇಶದಲ್ಲಿ ಪಟಾಕಿ ಸಿಡಿಸಿ ಶಬ್ಧ ಮಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ, ಕಾರಂಜಿ ಕೆರೆ, ಲಿಂಗಾಬುಧಿ ಕೆರೆ, ಸಾರ್ವಜನಿಕ ಉದ್ಯಾನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಂಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳ ಬಳಿ 100 ಮೀಟರ್ ಸುತ್ತ ಪ್ರದೇಶವನ್ನು ನ.16ರ ಮಧ್ಯರಾತ್ರಿ 12ಗಂಟೆ ವರೆಗೆ ನಿಶಬ್ಧವಲಯವಾಗಿ ಘೋಷಿಸಿದ್ದಾರೆ.
ಈ ನಿಶಬ್ಧವಲಯದಲ್ಲಿ ಪಟಾಕಿ ಸಿಡಿಸಿ ನಿಯಮ ಉಲ್ಲಂಘಿಸಿದಲ್ಲಿ ಕ್ರಮ ಜರುಗಿಸಲಾಗುವುದು. ನಗರದಲ್ಲಿ ಈಗಾಗಲೇ ವಾಯು ಹಾಗೂ ಶಬ್ಧ ಮಾಲಿನ್ಯ ಹೆಚ್ಚಾಗುತ್ತಿದೆ. ಪಟಾಕಿ ಸಿಡಿಸುವುದರಿಂದ ರಾಸಾದ ಆಚರಣೆ ವೇಳೆ ಉಂಟಾಗುವ ಶಬ್ಧ ಹಾಗೂ ವಾಯು ಮಾಲಿನ್ಯದಿಂದ ಹಿರಿಯ ನಾಗರಿಕರು, ಅಸ್ವಸ್ಥರು ಅಸಹಾಯಕರು ಹಾಗೂ ಪ್ರಾಣಿಪಕ್ಷಿಗಳಿಗೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟುವ ಸಂಬಂಧ ಈ ಆದೇಶ ಹೊರಡಿಸಲಾಗಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.