ಚಿಕ್ಕಮಗಳೂರು: ನಿಸ್ವಾರ್ಥ ಸೇವೆಯೇ ಲಯನ್ಸ್ ಸಂಸ್ಥೆಯ ಪರಮ ಗುರಿ ಎಂದು ಲಯನ್ಸ್ ಕ್ಲಬ್‌ನ ಪ್ರಾಂತೀಯ ಅಧ್ಯಕ್ಷ ಎಂ.ಬಿ. ಗೋಪಾಲಗೌಡ ತಿಳಿಸಿದರು.
ನಗರದ ಮಧುವನ ಬಡಾವಣೆಯಲ್ಲಿರುವ ಲಯನ್ಸ್ ಸೇವಾ ಭವನದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ತ್ರಿವೇಣಿ ಸಂಗಮ ಕಾರ್ಯಕ್ರಮದಲ್ಲಿ ಲಯನ್ಸ್ ಸೇವಾ ಸಂಸ್ಥೆಗೆ ಸದಸ್ಯರಾಗಿ ಸೇರ್ಪಡೆಗೊಂಡ ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದರು.
ವಿಶ್ವದ ೨೨೦ ದೇಶಗಳಲ್ಲಿ ಸೇವಾ ಕಾರ್ಯವನ್ನೇ ತನ್ನ ಧ್ಯೇಯವನ್ನಾಗಿಸಿಕೊಂಡು ಕೆಲಸ ಮಾಡುತ್ತಿರುವ ಸೇವಾ ಸಂಸ್ಥೆಗಳ ಪೈಕಿ ಲಯನ್ಸ್ ಸಂಸ್ಥೆ ಅಗ್ರಸ್ಥಾನದಲ್ಲಿದೆ. ಕೇವಲ ಮೂರು ತಿಂಗಳಲ್ಲಿ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಮತ್ತು ತರೀಕೆರೆಯಲ್ಲಿ ಲಯನ್ಸ್ಕ್ಲಬ್‌ನ ನೂತನ ಶಾಖೆಗಳು ಕಾರ್ಯಾರಂಭ ಮಾಡಿದ್ದು, ಈ ವರ್ಷದಲ್ಲಿ ಇನ್ನೂ ಮೂರು ಹೊಸ ಶಾಖೆಗಳನ್ನು ತೆರೆಯುವ ಉz್ದೆÃಶವಿದೆ ಎಂದು ಹೇಳಿದರು.
ಲಯನ್ಸ್ ಸಂಸ್ಥೆಗೆ ಹೊಸ ಸದಸ್ಯರನ್ನು ಸೇರ್ಪಡೆ ಮಾಡಿಕೊಳ್ಳುವುದರ ಜೊತೆಗೆ ಅವರನ್ನು ಸಕ್ರಿಯವಾಗಿ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಬಹಳ ಮುಖ್ಯ ಎಂದು ತಿಳಿಸಿದರು.
ಲಯನ್ಸ್ ಕ್ಲಬ್‌ನ ವಲಯಾಧ್ಯಕ್ಷ ಬಿ.ಎನ್.ವೆಂಕಟೇಶ್ ಮಾತನಾಡಿ, ವಿಶ್ವದಲ್ಲೇ ಸೇವಾ ಚಟುವಟಿಕೆಗಳಲ್ಲಿ ಲಯನ್ಸ್ ಸಂಸ್ಥೆ ಅಗ್ರಸ್ಥಾನದಲ್ಲಿದ್ದು, ಯಾವುದೇ ಫಲಾಪೇಕ್ಷೆ ಇಲ್ಲದೇ ಕೆಲಸ ಮಾಡಲು ಲಯನ್ಸ್ ಸೇವಾ ಸಂಸ್ಥೆ ಒಂದು ಉತ್ತಮ ವೇದಿಕೆ ಎಂದು ಹೇಳಿದರು.
ಚಿಕ್ಕಮಗಳೂರಿನಲ್ಲಿ ಹುಟ್ಟಿಕೊಂಡು ಲಯನ್ಸ್ ಸಂಸ್ಥೆ ತನ್ನ ಸೇವಾ ಕಾರ್ಯಗಳ ಮೂಲಕ ೫೦ ವಸಂತಗಳನ್ನು ಪೂರೈಸಿ ಈ ವರ್ಷ ತನ್ನ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಲಯನ್ಸ್ ಸಂಸ್ಥೆ ಈ ಮಟ್ಟಕ್ಕೆ ಬೆಳೆಯಲು ಈ ಹಿಂದೆ ಸಂಸ್ಥೆಯಲ್ಲಿ ಕೆಲಸ ಮಾಡಿದ ಬಹಳಷ್ಟು ಹಿರಿಯ ಸದಸ್ಯರ ಪರಿಶ್ರಮ ಅಡಗಿದೆ. ಇಂತಹ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷೆ ನೇತ್ರಾ ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಎಲ್ಲ ಹಿರಿಯ, ಕಿರಿಯ ಸದಸ್ಯರ ಸಹಕಾರ ಅಗತ್ಯ ಎಂದರು ತಿಳಿಸಿದರು.
ಮೂಡಿಗೆರೆ ಲಯನ್ಸ್ ಕ್ಲಬ್ ಅಧ್ಯಕ್ಷ ಜಯಕುಮಾರ್, ತರೀಕೆರೆ ಕ್ಲಬ್ ಅಧ್ಯಕ್ಷ ಸಾಯಿಕುಮಾರ್, ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿ ಲಯನ್ಸ್ ಕ್ಲಬ್ ಅಧ್ಯಕ್ಷ ತಮ್ಮಣ್ಣಗೌಡ ಮತ್ತು ಗೋಣಿಬೀಡು ಲಯನ್ಸ್ ಕ್ಲಬ್ ಅಧ್ಯಕ್ಷ ರಾಮ್‌ಪ್ರಸಾದ್ ಹಾಗೂ ಕಡೂರಿನ ಅರಿವಿನಮನೆ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ಶಶಿಧರ್, ಚಿಕ್ಕಮಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಪುಷ್ಪರಾಜ್, ಕಾರ್ಯದರ್ಶಿ ಗೋಪಿಕೃಷ್ಣ, ಪ್ರಮುಖರಾದ ಜೆ.ಪಿ.ಕೃಷ್ಣೇಗೌಡ ಮತ್ತಿತರರಿದ್ದರು.