ಕಲಬುರಗಿ: ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆಯುವ ರಾಷ್ಟç ಮಟ್ಟದ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ನಡೆದಿರುವ ಅಕ್ರಮದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಸ್.ಆರ್.ಕೊಲ್ಲೂರ ಆಗ್ರಹಿಸಿದರು. ಅಕ್ರಮ ನಡೆದಿದೆ ಎಂಬುದನ್ನು ಕೇಂದ್ರ ಉನ್ನತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಒಪ್ಪಿಕೊಂಡಿದ್ದು, ಕೂಡಲೇ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಗುಜರಾತ್‌ನ ಗೋದ್ರಾ ಪರೀಕ್ಷಾ ಕೇಂದ್ರದಲ್ಲಿ ನಡೆದ ಅಕ್ರಮದ ಬಗ್ಗೆಯೇ ಐವರನ್ನು ಬಂಧಿಸಲಾಗಿದೆ. ಬಿಹಾರದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದು, ೧೩ ಜನರನ್ನು ಬಂಧಿಸಲಾಗಿದೆ. ದೆಹಲಿಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಅಕ್ರಮ ಬಯಲಿಗೆ ಬಂದಿದ್ದು, ಸುಪ್ರೀಂ ಕೋರ್ಟ್ ಸಹ ಅಕ್ರಮ ಸಹಿಸುವುದಿಲ್ಲ ಎಂದಿದೆ. ೬೭ ವಿದ್ಯಾರ್ಥಿಗಳು ೭೨೦ಕ್ಕೆ ೭೨೦ ಅಂಕ ಪಡೆದಿರುವುದು ಅಕ್ರಮಕ್ಕೆ ಬಹುದೊಡ್ಡ ಸಾಕ್ಷಿ ಎಂದು ಆರೋಪಿಸಿದರು. ದೇಶಾದ್ಯಂತ ವಿದ್ಯಾರ್ಥಿಗಳು ಹೋರಾಟ ಮಾಡುತ್ತಿದ್ದು, ಸರ್ಕಾರ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಟ್ ಪರೀಕ್ಷೆ ರದ್ದು ಪಡಿಸುವ ಹೋರಾಟಕ್ಕೆ ಕೈ ಜೋಡಿಸಬೇಕು ಎಂದು ಆಗ್ರಹಿಸಿದರು. ಪ್ರಮುಖರಾದ ಶಿವಯೋಗಿ ದೇವೆಂದ್ರಕರ್, ಮಲ್ಲಿಕಾರ್ಜುನ ಶೆಳ್ಳಗಿ, ಪಾಂಡುರAಗ ಮದನಕರ್ ಇದ್ದರು