ಜಿಲ್ಲೆ

ನೀಟ್ ತರಬೇತಿ ಸದುಪಯೋಗಪಡಿಸಿಕೊಳ್ಳಿ

ನಾಪೋಕ್ಲು: ವಿದ್ಯಾರ್ಥಿನಿಯರು ನೀಟ್ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಖಾಫಿ ಸಲಹೆ ನೀಡಿದರು.

ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಕೊಟ್ಟಮುಡಿಯ ಮರ್ಕಝುಲ್ ಹಿದಾಯ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ನೀಟ್ ತರಬೇತಿ ಶಿಬಿರದಲ್ಲಿ ಮಾತನಾಡಿದರು.

ಉದ್ಘಾಟನೆಯನ್ನು ವೈದ್ಯ ಡಾ.ಅಬ್ದುಲ್ ಅಜೀಜ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಸಂಸ್ಥೆಯ ಹಿರಿಯ ಕಾರ್ಯದರ್ಶಿ ಯೂಸುಫ್ ಹಾಜಿ ವಹಿಸಿದ್ದರು. ಸಂಸ್ಥೆಯ ನಿರ್ದೇಶಕರೂ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಮೊಹಮ್ಮದ್ ಹಾಜಿ ಕುಂಜಿಲ ಮಾತನಾಡಿದರು.

ನ್ಯೂಕ್ಲೈ ನೀಟ್ ಫೌಂಡೇಷನ್‌ನ ಸೈಯದ್ ಭಾಷಾ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದರು. ಪ್ರಾಂಶುಪಾಲರು, ಉಪನ್ಯಾಸಕರು, ಪಾಲಕರು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.