Make sure the water problem doesn't get worse. 
ಜಿಲ್ಲೆ

ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ನೋಡಿಕೊಳ್ಳಿ

ಇಳಕಲ್ಲ(ಗ್ರಾ): ಬೇಸಿಗೆಯ ಈ ಕಠಿಣ ಸಮಯದಲ್ಲಿ ಅವಳಿ ತಾಲೂಕುಗಳ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಎಚ್ಚರಿಸಿದರು.

ನಗರದ ಗೃಹ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಹುನಗುಂದ-ಇಳಕಲ್ ಅವಳಿ ತಾಲೂಕುಗಳ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನರಿಗಾಗಲಿ, ದನಕರುಗಳಿಗಾಗಲಿ ನೀರಿನ ಬವಣೆ ಬಾರದಂತೆ ಸಮರೋಪಾದಿಯಲ್ಲಿ ಕಾರ್ಯ ಮಾಡಬೇಕು. ಅದಕ್ಕೆ ಬೇಕಾಗಬಹುದಾದ ಅನುದಾನ ಒದಗಿಸಲು ಸಿದ್ಧ. ಆದರೆ ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಆಗಬಾರದು ಎಂದು ಹೇಳಿದರು.

ಎರಡೂ ತಾಲೂಕುಗಳಲ್ಲಿ ನೀರಿನ ಲಭ್ಯತೆ ಹೇಗಿದೆ? ಎಲ್ಲಿ ನೀರಿಗಾಗಿ ಹಾಹಾಕಾರ ಇದೆಯೋ ಅಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಸೂಚಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಸೋಮಲಿಂಗಪ್ಪ ಅಂಟರದಾನಿ, ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ, ಅಧ್ಯಕ್ಷೆ ಸುಧಾರಾಣಿ ಸಂಗಮ, ಹುನಗುಂದ ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ ಇದ್ದರು.