ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಿಲಾ ಎಂಬಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿ ನೀರು ಪಾಲಾಗುತ್ತಿರುವುದನ್ನು ನೋಡಿದ ವ್ಯಕ್ತಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೀನು ಹಿಡಿಯಲು ತೆರಳಿದ್ದ ಜೋಕಿಂ ಮಸ್ಕರೇನಸ್ (೫೮) ಅವರು ಮಂಗಳವಾರ ಮೀನು ಹಿಡಿಯಲು ಆವೆ ಮಣ್ಣಿನ ಪಾಯಕ್ಕೆ ಹೋಗಿದ್ದರು. ಅಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದರು. ಈ ಘಟನೆಯನ್ನು ನೋಡಿದ ಅಲ್ಲಿದ್ದ ವ್ಯಕ್ತಿ ಆಘಾತದಿಂದ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿದ ವೈದ್ಯರು ಹೃದಯಾಘಾತವಾಗಿರುವುದನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.