ಬಾಗಲಕೋಟೆ ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ಆವರಣದಲ್ಲಿ ಶೀಘ್ರವಾಗಿ ಆರಂಭವಾಗಲಿರುವ ಸುಪರ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ೧೬೦೦ ಕಿಲೊ ವ್ಯಾಟ್ ನ ಅತ್ಯಾಧುನಿಕ ವಿದ್ಯುತ್ ಸ್ಥಾವರ ಬಿವಿವಿ ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಸಿ.ಚರಂತಿಮಠ ಚಾಲನೆ ನೀಡಿದರು.  
ಜಿಲ್ಲೆ

ನೂತನ ಅತ್ಯಾಧುನಿಕ ವಿದ್ಯುತ್ ಸ್ಥಾವರಕ್ಕೆ ಚಾಲನೆ

ಸಂತೋಷ ದೇಶಪಾಂಡೆ

ಬಾಗಲಕೋಟೆ: ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ಆವರಣದಲ್ಲಿ ಶೀಘ್ರವಾಗಿ ಆರಂಭವಾಗಲಿರುವ ಸುಪರ ಸ್ಪೆಶಾಲಿಟಿ ಆಸ್ಪತ್ರೆಗೆ ಪೂರಕವಾಗಿ ನೂತನವಾಗಿ ಮೂರು ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗಿರುವ ೧೬೦೦ ಕಿಲೊ ವ್ಯಾಟ್ ನ ಅತ್ಯಾಧುನಿಕ ವಿದ್ಯುತ್ ಸ್ಥಾವರದೊಂದಿಗೆ ೧೦೧೦ ಕಿಲೊ ವ್ಯಾಟ್‌ನ ಎರಡು ಜನರೇಟರಗಳಿಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಸಿ.ಚರಂತಿಮಠ ಚಾಲನೆ ನೀಡಿದರು.

ಶುಕ್ರವಾರ ಬೆಳಗ್ಗೆ ೧೦ ಗಂಟೆಗೆ ವಿದ್ಯುತ್ ಸ್ಥಾವರ ಮತ್ತು ಹೊಸ ಜನರೇಟರಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಈ ಅತ್ಯಾಧುನಿಕ ಸುಪರ ಸ್ಪೆಶಾಲಿಟಿ ಆಸ್ಪತ್ರೆ ಬಾಗಲಕೋಟೆ ಮತ್ತು ಸುತ್ತಲಿನ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ವರದಾನವಾಗಲಿದೆ ಎಲ್ಲಾ ವಿಧದ ರೋಗಿಗಳಿಗೆ ಈ ಆಸ್ಪತ್ರೆಯಲ್ಲಿ ಆಧುನಿಕ ಉಪಕರಣಗಳೊಂದಿಗೆ ನುರಿತ ತಜ್ಞ ವೈದ್ಯರುಗಳಿಂದ ಪರಿಣಾಮಕಾರಿ ಚಿಕಿತ್ಸೆ ಲಭಿಸಲಿದೆ ಎಂದರು.

ಈ ಸಂದರ್ಭದಲ್ಲಿ ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ್ ಅಥಣಿ, ಕಟ್ಟಡ ವಿಭಾಗದ ಕಾರ್ಯಾಧ್ಯಕ್ಷ ಮಹೇಶ ಕಕರಡ್ಡಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರು), ಸಂಘದ ಸದಸ್ಯರಾದ ವಿಶ್ವನಾಥ ಇಲ್ಯಾಳಶಟ್ಟರ, ಸುಪರ ಸ್ಪೆಶಾಲಿಟಿ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಡಾ.ನವೀನ ವೀ. ಚರಂತಿಮಠ, ಎಸ್.ಎನ್. ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಡಾ.ಭುವನೇಶ್ವರಿ ಯಳಮಲಿ, ಎಚ್.ಎಸ್.ಕೆ.ಆಸ್ಪತ್ರೆಯ ವೈದ್ಯಕೀಯ ಅಽÃಕ್ಷಕ ಡಾ.ಶ್ರೀರಾಮ ಕೋರಾ, ದಂತ ಕಾಲೇಜಿನ ಪ್ರಾಚಾರ್ಯ ಡಾ.ಶ್ರೀನಿವಾಸ ವನಕಿ, ಕೊಲ್ಹಾಪುರದ ಎಲಮೆಕ್ ಇಂಜಿನಿಯರಿAಗ್ ಕಂಪನಿಯ ಗುತ್ತಿಗೆದಾರ ಅಶ್ವಿನ್ ಹೆಗಡೆ, ಕಟ್ಟಡ ವಿಭಾಗದ ಇಂಜಿನೀಯರಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.