ಅಫಜಲಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನೂರೇ ದಿನಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ. ರೈತ ವಿರೋಧಿ ನೀತಿಯಿಂದಾಗಿ ಅನ್ನದಾತರು ಬೇಸತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ದೂರಿದರು.
ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ನೀಡುವ ಭರದಲ್ಲಿ ವಸ್ತುಗಳ ಬೆಲೆ ಏರಿಕೆ ಮಾಡಿ, ಜನ ಸಾಮಾನ್ಯರನ್ನು ಕಷ್ಟಕ್ಕೆ ತಳ್ಳಿದೆ. ಸಚಿವರು ತಮ್ಮ ಪಕ್ಷದ ಶಾಸಕರನ್ನೇ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ರಾಜಕೀಯ ದುರಾಸೆಯಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ರೈತ ವಿರೋಧಿ ನೀತಿಯಿಂದಾಗಿ ಅನ್ನದಾತರು ಆತ್ಮಹತ್ಯೆ ಹಾದಿ ತುಳಿಯುತ್ತಿದ್ದಾರೆ. ಇನ್ನು ಕಮಿಷನ್ ದಂಧೆಯಿಂದಾಗಿ ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಬಿಜೆಪಿ ರೈತಪರ ಪಾರ್ಟಿಯಾಗಿದ್ದು, ಅನ್ನದಾತರ ಪರ ನಿರಂತರ ಹೋರಾಟ ನಡೆಸುತ್ತೇವೆ ಎಂದರು.
ಬಿಜೆಪಿ ತಾಲೂಕು ಅಧ್ಯಕ್ಷ ಶೈಲೇಶ ಗುಣಾರಿ, ಪ್ರಮುಖರಾದ ಅಶೋಕ ಬಗಲಿ, ಮಲ್ಲಿಕಾರ್ಜುನ ನಿಂಗದಳ್ಳಿ, ಅವ್ವಣ್ಣ ಮ್ಯಾಕೇರಿ, ಶಂಕರಲಿAಗ ಮೇತ್ರಿ, ಶ್ರೀಶೈಲ ಬಳೂರ್ಗಿ, ಶಿವು ಪ್ಯಾಟಿ, ಶರಣು ಪದಕಿ, ಸಿದ್ದು ದಿಕ್ಸಂಗಿ, ಅಪ್ಪಾಶಾ ಬುರಲಿ, ಸಾವಿರಪ್ಪ ಪೂಜಾರಿ ಇತರರಿದ್ದರು.