ಜಿಲ್ಲೆ

ನೇಣು ಬಿಗಿದುಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

ಕಲಬುರಗಿ: ನಗರ ಹೊರವಲಯದ ಉದನೂರ ರಸ್ತೆಯ ಜಮೀನಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ನೇಣು ಹಾಕಿಕೊಂಡು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ಚಿತ್ತಾಪುರ ತಾಲೂಕಿನ ಮಾಡಬೂಳ ಪೊಲೀಸ್ ಠಾಣೆ ಕಾನ್‌ಸ್ಟೆಬಲ್ ದೊಡ್ಡೇಶ್ (40) ಆತ್ಮಹತ್ಯೆ ಮಾಡಿಕೊಂಡು ಮೃತರು. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಹೈಕೋರ್ಟ್ ಕಲಬುರಗಿ ಪೀಠ ಸಮೀಪದ ಬಡಾವಣೆಯಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.