ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ಗೋವಿಂದ ಕಾರಜೋಳ, ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ವಿ.ಪ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ. ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಉಪಾಧ್ಯಕ್ಷರಾದ ಅಶೋಕ ಲಿಂಬಾವಳಿ, ನಾರಾಯಣ ಯಡಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಇದ್ದರು. 
ಜಿಲ್ಲೆ

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ

ಬಾಗಲಕೋಟೆ: ಅಽವೇಶನ ನಡೆಯುವ ವೇಳೆ ಬೆಳಗಾವಿಯಲ್ಲಿ ಮಹಿಳೆ ಮೇಲಿ ನಡೆದ ದೌರ್ಜನ್ಯ ಖಂಡಿಸಿ ಹಾಗೂ ಘಟನೆಗೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂದರ್ಭದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ರಾಜ್ಯದಲ್ಲಿ ಸಿದ್ರಾಮಯ್ಯನವರ ನೇತೃತ್ವದ ಕಾಂಗ್ರೆಸ್ಸ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಮಹಿಳೆಯರಿಗೆ, ದೀನ ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ. ಇಂದು ದೌರ್ಜನ್ಯ, ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತೀವೆ. ಬೆಳಗಾವಿಯಲ್ಲಿ ನಡೆದ ಎರಡು ಕಹಿ ಘಟನೆಗಳನ್ನು ಯಾರು ಮರಿಯಲಿಕ್ಕೆ ಸಾಧ್ಯವಿಲ್ಲಾ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತರುವ ಕೆಲಸ ನಡೆದಿದೆ. ಮಹಿಳೆಯನ್ನು ಬೆತ್ತಲೆಮಾಡಿ ಮೆರವಣಿಗೆ ಮಾಡಿದ್ದು, ಕಂಬಕ್ಕೆ ಕಟ್ಟಿ ಹೊಡೆದಿದ್ದು ನಾಡಿನ ಜನತೆ ತೆಲೆ ತಗ್ಗಿಸುವಂತಾಗಿದೆ. ಕೂಡಲೇ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ, ಸಚಿವ ಲಕ್ಷ್ಮೀ ಹೆಬ್ಬಾಳಕರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬೆಳಗಾವಿಯಿಲ್ಲಿ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ ಮೇಲೆ ಮಾರಣಾಂತಿಕ ಹಲ್ಲೆಮಾಡಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಸಹೋದರ ಶಾಸಕ ಹಟ್ಟಿಹೊಳೆ ಅವರ ಕೃತ್ಯವಾಗಿದೆ. ಚೆನ್ನರಾಜ ಹಟ್ಟಿಹೊಳಿ ಅವರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬೆಳಗಾವಿ ಘಟನೆಯನ್ನು ನಿರ್ಲಕ್ಷ್ಯ ಮಾಡಿದೆ. ಯಾವುದೆ ಸಚಿವರು, ಮಂತ್ರಿಗಳು ಆ ಘಟನಾ ಸ್ಥಳಕ್ಕೆ ಭೇಟಿ ನೀಡದಿರುವುದು ವಿಷಾದನೀಯ. ಕೇಂದ್ರದಿಂದ ಮಹಿಳಾ ಸಂಸದರ ತಂಡ ಬೆಳಗಾವಿ ಭೇಟಿ ನೀಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗುವ ವರೆಗೆ ಹೋರಾಟ ನಿಲ್ಲದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ವಿ.ಪ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ. ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಉಪಾಧ್ಯಕ್ಷರಾದ ಅಶೋಕ ಲಿಂಬಾವಳಿ, ನಾರಾಯಣ ಯಡಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಮಲ್ಲಯ್ಯ ಮೂಗನೂರಮಠ, ಮುಖಂಡರಾದ ಜಿ.ಎನ್.ಪಾಟೀಲ, ಸತ್ಯನಾರಾಯಣ ಹೆಮಾದ್ರಿ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರು, ಕಲ್ಲಪ್ಪ ಭಗವತಿ, ಮಲ್ಲೇಶ ವಿಜಾಪುರ, ಸದಾನಂದ ನಾರಾ, ಸವಿತಾ ಹೊಸುರು. ಜ್ಯೋತಿ ಭಜಂತ್ರಿ, ಶೋಭಾ ರಾವ, ಅನಿತಾ ಸರೋದೆ, ಶಿವಲೀಲಾ ಪಟ್ಟಣಶೆಟ್ಟಿ, ಉಮಾ ಚೆಟ್ಟರಕಿ ಇತರರು ಇದ್ದರು.