ಯಾದಗಿರಿ: ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಮುಖ್ಯಮಂತ್ರಿ ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿ ವಜಾಗೊಂಡಿದ್ದು, ಕೂಲಡೇ ತಮ್ಮ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಯುವ ಮುಖಂಡ ಮಹೇಶ ಮುದ್ನಾಳ್ ಆಗ್ರಹಿಸಿದರು.
ಈ ಕುರಿತು ಬುಧವಾರ ಜಿಲ್ಲಾ ಬಿಜೆಪಿಯಿಂದ ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ರಾಜ್ಯಪಾಲರು ಸಲ್ಲಿಸಿರುವ ಪ್ರಾಸಿಕ್ಯೂಷನ್ ಎತ್ತಿಹಿಡಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತಕ್ಷಣಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆಗೆ ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.
ದೇಶದ ಕಾನೂನು ಎಲ್ಲರಿಗೂ ಒಂದೆಯಾಗಿದೆ. ಇತರರ ವಿಚಾರದಲ್ಲಿ ರಾಜೀನಾಮೆ ಕೇಳಲು ಬಹಳ ಆಸಕ್ತಿ ವಹಿಸುತ್ತಿದ್ದ ಮುಖ್ಯಮಂತ್ರಿ ಅವರು ತಮ್ಮ ಸರದಿ ಬಂದಾಗ ರಾಜೀನಾಮೆ ನೀಡದೆ ವಿನಾಃ ಕಾರಣ ಕಾಲಹರಣ ಮಾಡುತ್ತಿರುವುದು ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಎಸಗಿದ ಘೋರ ಅಪರಾಧವಾಗಿದೆ ದೂರಿದರು.
ಕಾರ್ಯದರ್ಶಿ ಲಲಿತಾ ಅನಪುರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಂಪತ್ತು ಲೂಟಿ ಮಾಡಿ ಮಾಡಿದ್ದಾರೆ. ಅವರಿಗೆ ಜೈಲಿಗೆ ಕಳುಹಿಸಬೇಕು. ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದೆಲ್ಲ ಬೊಗಳೆ ಬಿಡುತ್ತಿದ್ದರು. ಈಗ ಅವರ ಮಾತು ಉಳಿಸಿಕೊಳ್ಳುವ ಅವಕಾಶ ಒದಗಿಬಂದಿದೆ. ಹೀಗಾಗಿ ಕೂಡಲೇ ರಾಜೀನಾಮೆ ನೀಡಬೇಕು ಎಂದರು.
ಅಲೆಮಾರಿ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ದೆವಿಂದ್ರನಾಥ ನಾದ ಮಾತನಾಡಿ, ಮುಖ್ಯಮಂತ್ರಿ ಅಅವರು ಅಧಿಕಾರದ ದಾಹದಿಂದ ಜನರ ಭಾವನೆಯೊಂದಿಗೆ ಚೆಲ್ಲಾಟವಾಡಿ, ರಾಜ್ಯವನ್ನು ದಿವಾಳಿಯ ಅಂಚಿಗೆ ನೂಕಿದ್ದಾರೆ. ಹೈಕೋರ್ಟ್ ನೀಡಿದ ತೀರ್ಪಿಗೆ ಶೀಘ್ರ ರಾಜೀನಾಮೆ ನೀಡಿ, ಮುಂದಿನ ಪ್ರಕ್ರಿಯೆಗೆ ಸಹಕರಿಸಿ ಈ ನೆಲದ ಕಾನೂನನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ, ಪರುಶುರಾಮ ಕುರಕುಂದಿ, ಮೆಲ್ಲಪ್ಪ ಗುಳಗಿ, ವೆಂಕಟರಡ್ಡಿ ಅಬ್ಬೆತುಮಕೂರು, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೋನ್ನದ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಹುಸೇನ್ ಭಾಷಾ, ನಗರಸಭೆ ಮಾಜಿ ಅಧ್ಯಕ್ಷ ವಿಲಾಸ ಪಾಟೀಲ್, ನಗರಸಭೆ ಮಾಜಿ ಉಪಾಧ್ಯಕ್ಷೆ ಪ್ರಭಾವತಿ ಕಲಾಲ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ, ಮಂಜುನಾಥ ದಾಸನಕೆರಿ, ವಿಜಯಲಕ್ಷಿö್ಮÃ ನಾಯಕ, ಶಾಂತಗೌಡ ಪಗಲಪುರ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ ದೊಡ್ಡಮನಿ, ಮಲ್ಲಿಕಾರ್ಜುನ ಕಟ್ಟಿಮನಿ, ಬಸವರಾಜಪ್ಪಗೌಡ ಬಿಳಾರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ರಾಯಚೂರು, ಮಹೀಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚವ್ಹಾಣ್, ಮೌನೇಶ ಬೆಳಿಗೆರಿ, ಶಕುಂತಲಾ ಗಚ್ಚಿನಮನಿ, ರಾಜಶೇಖರ ಉಪ್ಪಿ, ಸಾಬು ಚಂಡ್ರಕಿ, ಶ್ರೀಕಾಂತ ಸುಂಗಲಕರ, ಮನೋಹರ್ ಪವಾರ, ಸಿದ್ದು ತಳಕ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೆಸೂರ ಸೇರಿದಂತೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.