ಯಾದಗಿರಿ: ಗಣೇಶ ಹಬ್ಬದ ಹಿನ್ನೆಲೆ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟ ಪರಿಸರದ ಮೇಲೆ ದುಷ್ಠರಿಣಾಮ ಉಂಟಾಗುವುದಲ್ಲದೆ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ ಅಲ್ಲದೆ ಸಾರ್ವಜನಿಕ ಆರೋಗ್ಯಕ್ಕೂ ಹಾನಿ ಉಂಟಾಗುತ್ತದೆ, ನಿಗಧಿಪಡಿಸಿರುವ ಸ್ಥಳಗಳಲ್ಲಿ ಮಾತ್ರ ಮೂರ್ತಿಗಳನ್ನು ವಿಸರ್ಜಿಸಬೇಕು ಎಂದು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿರುತ್ತದೆ, ಇದರಿದಾಂಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟ ಪರಿಸರದ ಮೇಲೆ ದುಷ್ಠರಿಣಾಮ ಉಂಟಾಗುವುದಲ್ಲದೆ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ ಅಲ್ಲದೆ ಸಾರ್ವಜನಿಕರ ಆರೋಗ್ಯಕ್ಕೂ ಹಾನಿ ಉಂಟಾಗುತ್ತದೆ, ನಿಗಧಿಪಡಿಸಿರುವ ಸ್ಥಳಗಳಲ್ಲಿ ಮಾತ್ರ ಮೂರ್ತಿಗಳನ್ನು ವಿಸರ್ಜಿಸಬೇಕು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆಯನ್ನು ಹೊರಡಿಸಿದ್ದು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿರುತ್ತದೆ, ಆದ್ದರಿಂದ ಸಾರ್ವಜನಿಕರು ಈ ಕೆಳಕಂಡ ಕ್ರಮಗಳನ್ನು ಅನುಸರಿಸಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕಾಗಿ ಕೋರಿದೆ.