ಜಿಲ್ಲೆ

ನೊಂದವರಿಗೆ ನ್ಯಾಯ ದೊರಕಿಸಿ

ಯಾದಗಿರಿ : ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣ ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಸಂಬಂಸಿದ ಇಲಾಖೆ ಅಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಕಾರಿ ಡಾ.ಸುಶೀಲಾ ಬಿ., ತಿಳಿಸಿದರು. ನೀಡಿದರು.

ನಗರದ ಜಿಲ್ಲಾಕಾರಿ ಕಚೇರಿಯ ಸಭಾಂಗಣದಲ್ಲಿ ಕರೆದಿದ್ದ ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ನಿಯಂತ್ರಣ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿ, ಶೋಷಣೆ ಮಾಡಿದವರಿಗೆ ಕಾನೂನಿನಡಿ ಆಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮತ್ತು ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಶೋಷಿತ ವರ್ಗಗಳ ಮೇಲಿನ ದೌರ್ಜನ್ಯ ಅನಿಯಮ ಅನ್ವಯ ದಾಖಲಾದ ಪ್ರತಿಯೊಂದು ಪ್ರಕರಣಕ್ಕೆ ಸಂಬಂಸಿದಂತೆ ಪರಿಹಾರ ಧನ ಮಂಜೂರು ಮಾಡಬೇಕು. ಇದರಲ್ಲಿ ವಿಳಂಬ ಮಾಡುವಂತಿಲ್ಲ ಎಂದು ಸೂಚಿಸಿದರು.

ದೌರ್ಜನ್ಯ ಪ್ರಕರಣಗಳು ನಡೆದಾಗ ತಕ್ಷಣ ತಪ್ಪಿತಸ್ಥರನ್ನು ಬಂಸಿ, ಜನಾಂಗದವರ ಮೇಲೆ ನಡೆಯುವ ಹಲ್ಲೆಗಳನ್ನು ನಿಯಂತ್ರಿಸಬೇಕು. ಅಲ್ಲದೆ, ನಮ್ಮ ಸಮಾಜದವರು ಸಕರ್ಾರದ ವಿವಿಧ ಯೋಜನೆಗಳಡಿ ಸಾಲ ಪಡೆಯಲು ಹೋದರೆ ಬ್ಯಾಂಕ್ ಅಕಾರಿಗಳು ಸತಾಯಿಸುತ್ತಾರೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದೆ. ಇನ್ನೂ ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಪರಿಶಿಷ್ಟ  ಜಾತಿಯ ರೈತರು ತಮ್ಮ ಜಮೀನಿಗೆ ತೆರಳಲು ಸರಿಯಾದ ರಸ್ತೆ ಇಲ್ಲದೆ ಯಾತನೆ ಅನುಭವಿಸುತ್ತಿದ್ದು, ಹೊಲಕ್ಕೆ ರಸ್ತೆ ಮಾಡಿಕೊಡಬೇಕು ಎಂದು ಸಮಿತಿ ಸದಸ್ಯ ನಾಗಣ್ಣ ಬಡಿಗೇರಾ ಸಭೆ ಗಮನಕ್ಕೆ ತಂದರು.

ಜಿಲ್ಲೆಯ ಪರಿಶಿಷ್ಟ ಜಾತಿ, ವರ್ಗದ ವಿದ್ಯಾಥರ್ಿ ನಿಲಯಗಳಿಗೆ ಅಕಾರಿಗಳು ಆಗಾಗ ದಿಢೀರ್ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಆಹಾರದ ಗುಣಮಟ್ಟ ಮತ್ತು ಮೂಲಸೌಲಭ್ಯದ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಸಕಾರ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಬೇಕು ಎಂದು ಆದೇಶಿಸಿದೆ. ಈ ಬಗ್ಗೆ ನಿರ್ಲಕ್ಷ್ಯ ವಹಿಸುವಂತಿಲ್ಲ ಎಂದು ಜಿಲ್ಲಾಕಾರಿಗಳು ಹೇಳಿದರು.