ಜಿಲ್ಲೆ

ನೋಂದಣಿಗೆ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಪ್ರದೇಶದ 20 ರಿಂದ 45 ವಯೋಮಿತಿಯೊಳಗಿನ ಯುವತಿಯರಿಗಾಗಿ ಕೃತಕ ಆಭರಣ ಉಚಿತ ತರಬೇತಿಯನ್ನು ಸಂಸ್ಥೆ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತರಬೇತಿಯ ಅವಧಿ 13 ದಿನಗಳು. ಅ. 14 ರಿಂದ ನೀಡಲಾಗುತ್ತದೆ. ಊಟ ವಸತಿಯೊಂದಿಗೆ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಅಗತ್ಯ ಮಾಹಿತಿ ನೀಡಿ ಅ.10 ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಅಥವಾ ದೂ. 08392-299117, ಮೊ. 9449860659, 9008464120 ಗೆ ಸಂಪರ್ಕಿಸಬಹುದು.