ಬಾಗಲಕೋಟೆ: ಗೃಹಲಕ್ಷ್ಮೀ ಯೋಜನೆ ಅರ್ಜಿ ನೋಂದಣಿಗೆ ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಸೂಚಿಸಿದರು.
ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ, ಜಿಲ್ಲೆಯಾದ್ಯಂತ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸುವುದಕ್ಕೆ ಸಂಭಂದಿದಂತೆ ಚರ್ಚೆಸಲು ಸೋಮವಾರ ಸಂಜೆ ಜಿಲ್ಲೆಯ ಎಲ್ಲ ಉಪ ವಿಭಾಗಾಧಿಕಾರಿಗಳು, ತಶೀಲ್ದಾರರು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಜು.19 ರಂದು ರಾಜ್ಯಮಟ್ಟದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, 20 ರಿಂದ ಜಿಲ್ಲೆಯಲ್ಲಿ ಗ್ರಾಮನ್ ಸೆಂಟರ್ ಬಾಪೂಜಿ ಸೇವಾ ಕೇಂದ್ರ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ತರೆÉಯಲಾಗುವ ಕೇಂದ್ರಗಳಲ್ಲಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದರು.
ಅರ್ಹ ಪಲಾನುಭವಿಗಳ ನೋಂದಣಿ ಮಾಡಲು ಪ್ರತಿ ಒಂದು ಸಾವಿರ ಜನ ಸಂಖ್ಯೆಗೆ ಅನುಗುಣವಾಗಿ ಕಡ್ಡಾಯವಾಗಿ ಓರ್ವ ಮಹಿಳೆ ಇರುವಂತೆ 2 ಜನ ಪ್ರಜಾಪ್ರತಿನಿಧಿಗಳನ್ನು ಜಿಲ್ಲಾ ಉತ್ಸುವಾರಿ ಸಚಿವರು ಆಯ್ಕೆ ಮಾಡಲಿದ್ದು, ಅಗತ್ಯವಿರುವ ಸೇವಾ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂಧಿಯನ್ನು ನೇಮಿಸಿಕೊಳ್ಳಬೇಕು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ಮಾಡಿಕೊಳ್ಳಬೇಕು ಮತ್ತು ಸ್ಥಳೀಯ ಸಂಪನ್ಮೂಲಗಳನೆಲ್ಲಾ ಬಳಸಿಕೊಳ್ಳುವ ಮೂಲಕ ಒಟ್ಟಾರೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ. ಎಚ್. ಮಾತನಾಡಿ, ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ ಗೃಹ ಲಕ್ಷೀ ಯೋಚನೆಯಡಿ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ದೊರೆಯಲಿದ್ದು, ನೋಂದಣಿಗೆ ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಡಿತರ ಕಾರ್ಡ್ ಸಂಖ್ಯೆ, ಯಜಮಾನಿಯ ಮತ್ತು ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಮೊಬೆಲ್ ಸಂಖ್ಯೆ ಅಗತ್ಯವಿರುತ್ತದೆ. ವಾರದ ಎಲ್ಲಾ ದಿನಗಳಲ್ಲೂ ನೊಂದಣಿಗೆ ಅವಕಾಶವಿದ್ದು, ಪ್ರತಿ ಕೇಂದ್ರದಲ್ಲೂ ಒಂದು ದಿನಕ್ಕೆ ಬೆಳೆಗ್ಗೆ 30 ಮತ್ತು ಸಂಜೆ 30ರಂತೆ ಒಟ್ಟು 60 ಫಲಾನುಭವಿಗಳ ನೋಂದಣಿಗೆ ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಫಲಾನುಭವಿಗಳು ಸಹಾಯವಾಣಿ ಸಂಖ್ಯೆ 1902 ಸಂಪರ್ಕಿಸಬಹುದಾಗಿರುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ್ ಶಿನ್ನಾಳಕರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ, ಶಿಸು ಅಭಿವೃದ್ಧಿ ಯೋಜನಾಧಿಕಾರಿಗಳು ಇದ್ದರು.