ಜಿಲ್ಲೆ

ನೋಂದಣಿಗೆ ಮೂರು ಕಡೆ ಕಚೇರಿ ಆರಂಭ

ಬೇಲೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ತರವಾದ ಗೃಹಲಕ್ಷ್ಮೀ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕೆಂದು ಪಟ್ಟಣದಲ್ಲಿ ಮೂರು ಕಡೆ ನೋಂದಣಿಗಾಗಿ ಕಚೇರಿ ತೆರೆಯಲಾಗಿದೆ ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ಹೇಳಿದರು.


ಗೃಹಲಕ್ಷ್ಮೀ ಯೋಜನೆ ಜಾರಿ ಅಂಗವಾಗಿ ಪುರಸಭೆಯಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರ ಸಬಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತಂದಿರುವ ಮಹತ್ತರವಾದ ಯೋಜನೆ ಇದಾಗಿದೆ. ಈ ಯೋಜನೆಯಲ್ಲಿ ಮಹಿಳೆಯರು ದಾಖಲೆಗಳೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ಸರ್ಕಾರದ ಸವಲತ್ತು ಪಡೆಯಬೇಕು. ಇದರಿಂದ ಮಹಿಳೆಯರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪುರಸಭೆ ವ್ಯಾಪ್ತಿಯಲ್ಲಿ ಮೂರು ಕಡೆ ಕಚೇರಿ ಕೌಂಟರ್‌ಗಳನ್ನು ತೆರೆದು ನಮ್ಮ ಸಿಬ್ಬಂದಿಯನ್ನು ನೇಮಿಸಲಾಗಿದೆ. ಇಲ್ಲಿ ಅರ್ಹ ಮಹಿಳೆಯರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಯೋಜನೆಯಲ್ಲಿ ಸಿಗುವ ಸಹಾಯ ಪಡೆದು ಉತ್ತಮ ಜೀವನ ನಿರ್ವಹಣೆಗೆ ಮುಂದಾಗಬೇಕು ಎಂದರು.


ಪುರಸಭೆ ಉಪಾಧ್ಯಕ್ಷೆ ಜಮೀಲಾ ತೌಫಿಕ್, ಮುಖ್ಯಾಧಿಕಾರಿ ಎಸ್.ಡಿ.ಮಂಜುನಾಥ್, ಸದಸ್ಯರಾದ ಬಿ.ಗಿರೀಶ್, ಮಣಿ, ಉಷಾ, ಸೌಮ್ಯಾ, ಪ್ರಭಾಕರ್, ಕಂದಾಯಾಧಿಕಾರಿ ಹರೀಶ್, ಆರೋಗ್ಯಾಧಿಕಾರಿ ಜ್ಯೋತಿ ಸೇರಿದಂತೆ ಸಿಬ್ಬಂದಿ ಹಾಗೂ ಫಲಾನುಭವಿಗಳಿದ್ದರು.