ಯಾದಗಿರಿ: ಜಿಲ್ಲಾ ನ್ಯಾಯಾಲಯ ಕಟ್ಟಡದ ಕಂಪೌAಡ ಕಾಮಗಾರಿ ಕೂಡಲೇ ಆರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್.ಭೀಮು ನಾಯಕ್ ಆಗ್ರಹಿಸಿದ್ದಾರೆ. ಈ ಕುರಿತು ಕಾನೂನು ಸಚಿವರಿಗೆ ಪತ್ರ ಬರೆದಿರುವ ಅವರು, ಕಟ್ಟಡ ಕಾಮಗಾರಿ ಮುಗಿದಿದ್ದು, ಈಗ ಕಂಪೌAಡ ಕಾಮಗಾರಿ ವಿಳಂಬವಾಗುತ್ತಿರುವುದರಿAದ ಇದು ಲೋಕಾರ್ಪಣೆ ಮಾಡಲು ಆಗುತ್ತಿಲ್ಲ. ಹೀಗಾಗಿ ಪ್ರಕರಣಗಳ ವಿಲೇವಾರಿಗೆ ತೊಂದರೆಯಾಗುತ್ತಿದೆ. ಯಾವ ಉz್ದೆÃಶದಿಂದ ಇದು ವಿಳಂಬವಾಗುತ್ತಿದೆ. ಯಾರು ಇದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಂಡು ಕಂಪೌAಡ ನಿರ್ಮಿಸಬೇಕು ಎಂದು ಒತ್ತಾಯಿಸಿದರು. ನೂತನ ನ್ಯಾಯಾಲಯ ಸಂಕೀರ್ಣ ಶೀಘ್ರ ಕಾರ್ಯಾರಂಭ ಮಾಡಿದರೆ ಮಹಿಳಾ ನ್ಯಾಯಾಲಯ, ಫೋಕ್ಸೊ ಮುಂತಾದ ಘಟಕಗಳು ಕಾರ್ಯಾರಂಭ ಮಾಡುವ ಮೂಲಕ ಶೀಘ್ರ ನ್ಯಾಯದಾನಕ್ಕೆ ಅನುವಾಗುತ್ತದೆ. ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರಕಿ ಜನತೆಗೆ ಶೀಘ್ರ ನ್ಯಾಯ ದಾನವಾಗುತ್ತದೆ ಆದರೆ ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬAತೆ ಕೆಲ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಉz್ದÉÃಶಪೂರ್ವಕವಾಗಿ ಕಾಮಗಾರಿ ವಿಳಂಬಕ್ಕೆ ಕಾರಣರಾಗಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿದಿರು. ಯಾದಗಿರಿ ಕ್ಷೇತ್ರದ ಶಾಸಕರು ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಿ, ಅದು ಬಿಟ್ಟು ಕಾಮಗಾರಿ ನಿಲ್ಲಿಸುವುದು, ವಿಳಂಬ ಮಾಡಿಸುವುದು ಯಾವ ಉz್ದÉÃಶಕ್ಕಾಗಿ ಎಂದು ಅವರು ಪ್ರಶ್ನಿಸಿದ್ದಾರೆ. ಕೂಡಲೇ ಕಾಮಗಾರಿ ಆರಂಭಿಸಬೇಕು, ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದು ಅವರು ಎಚ್ಚರಿಕೆ ನೀಡಿದರು. ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ವಿಶ್ವಾರಾಧ್ಯ ದಿಮ್ಮೆ, ಅಂ¨ರೀಶ ಹತ್ತಿಮನಿ, ಸಂತೋಷ ನಿರ್ಮಲಕರ್, ಸುರೇಶ ಬೆಳಗುಂದಿ, ಅರ್ಜುನ ಪವಾರ, ಭೀಮರಾಯ ರಾಮಸಮುದ್ರ, ಸಿದ್ದಪ್ಪ ಕ್ಯಾಸಪನಳ್ಳಿ ಕಾಶೀನಾಥ ಇತರರಿದ್ದರು.