ಅರಕಲಗೂಡು: ಇಲ್ಲಿನ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಎಚ್.ಎಸ್. ರಶ್ಮಿ ಅವಿರೋಧವಾಗಿ ಆಯ್ಕೆಯಾದರು.
ಈ ಹಿಂದೆ ಉಪಾಧ್ಯಕ್ಷರಾಗಿದ್ದ ಲಕ್ಷ್ಮೀ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ರಶ್ಮಿ ಒಬ್ಬರೆ ನಾಮ ಪತ್ರ ಸಲ್ಲಿಸಿದ್ದರು.
ತಹಸೀಲ್ದಾರ್ ಕೆ.ಆರ್. ಶ್ರೀನಿವಾಸ್ ಚುನಾವಣಾ ಕಾರ್ಯ ನಿರ್ವಹಿಸಿದರು. ಪಪಂ ಅಧ್ಯಕ್ಷೆ ಶಾರದಾ, ಮುಖ್ಯಾಧಿಕಾರಿ ಶಿವಕುಮಾರ್ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.