ಬಾಗಲಕೋಟೆ ನಗರದ ಪ್ರೇಸ್‌ಕ್ಲಬ್‌ನಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ರವಿ ಪಟ್ಟಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಖಂಡರಾದ ಮಂಜುನಾಥ ಪುರತಗೇರಿ, ಬಸವರಾಜ ರಾಜೂರ, ಸಂಗಪ್ಪ ತೊಗಣಸಿ, ಶಂಕರ ಅರಶಿನಗೋಡಿ, ಪರಶುರಾಮ ಮುಳಗುಂದ ಇದ್ದರು. 
ಜಿಲ್ಲೆ

ಪಂಚಮಸಾಲಿ ಶಾಸಕರಿಗೆ ಅವಕಾಶ ನೀಡಿ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದಲ್ಲಿ ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು, ಬಿಜೆಪಿ ಪಕ್ಷವು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ವಿ.ಪಕ್ಷ ನಾಯಕನಾಗಿ ಆಯ್ಕೆ ಮಾಡಬೇಕು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ರವಿ ಪಟ್ಟಣದ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೯೯೯ರಲ್ಲಿ ವಿಜಯಾನಂದ ಕಾಶಪ್ಪನವರ್ ಅವರ ತಂದೆ ಎಸ್.ಆರ್. ಕಾಶಪ್ಪ ನವರ್ ಸಚಿವರಾಗಿ ಸೇವೆ ಸಲ್ಲಿಸಿ ದ್ದರು. ಕಾಶಪ್ಪನವರ್ ಕುಟುಂಬ ರಾಜಕೀಯ ಹಿನ್ನೆಲೆಯಲ್ಲಿ ಬಂದಿ ದ್ದು ಎಸ್.ಆರ್.ಕಾಶಪ್ಪನವರ್ ಪತ್ನಿ ಹಾಗೂ ೨೦೧೩ ರ ವಿಧಾನಸಭೆ ಚುನಾವಣೆಯಲ್ಲಿ ವಿಜಯಾನಂದ ಕಾಶಪ್ಪನವರ್ ಶಾಸಕರಾಗಿ ಆಯ್ಕೆಯಾಗಿದ್ದ ಸಂದರ್ಭದಲ್ಲಿಯೂ ಸಚಿವಸ್ಥಾನ ದೊರೆತಿಲ್ಲ. ಈ ಬಾರಿ ನೂತನ ಸರ್ಕಾರದಲ್ಲಿ ವಿಜಯಾನಂದ ಕಾಶಪ್ಪನವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿಕೊಂಡರು.

೨ಎ ಮೀಸಲಾತಿ ಹೋರಾಟದಲ್ಲಿ ವಿಜಯಾನಂದ ಕಾಶಪ್ಪನವರ್ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಮುಖ ಪಾತ್ರ ವಹಿಸಿ ಅಪಾರ ಶ್ರಮ ವಹಿಸಿದ್ದಾರೆ. ಆದ್ದರಿಂದ ಕಾಶಪ್ಪನವರಿಗೆ ಮಂತ್ರಿ ಸ್ಥಾನ ಹಾಗೂ ವಿರೋಧ ಪಕ್ಷದ ನಾಯಕರನ್ನಾಗಿ ಬನಸಗೌಡ ಪಾಟೀಲ ಯತ್ನಾಳ ಅವರನ್ನು ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಮಂಜುನಾಥ ಪುರತಗೇರಿ, ಬಸವರಾಜ ರಾಜೂರ, ಸಂಗಪ್ಪ ತೊಗಣಸಿ, ಶಂಕರ ಅರಶಿನಗೋಡಿ, ಪರಶುರಾಮ ಮುಳಗುಂದ ಸುದ್ದಿಗೋಷ್ಠಿಯಲ್ಲಿ ಇದ್ದರು.