ಜಿಲ್ಲೆ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ; ಬೆಳಗಾವಿಯಲ್ಲಿ ಧರಣಿ ನಾಳೆ

ಧಾರವಾಡ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಡಿ. 13ರಂದು ಬೆಳಗಾವಿಯ ಕಿತ್ತೂರು ಚೆನ್ಮಮ್ಮ ವೃತ್ತದಲ್ಲಿ ಸಮಾಜ ಬಾಂಧವರೊ0ದಿಗೆ ಧರಣಿ ನಡೆಸಲಾಗುವುದು ಎಂದು ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಮತ್ತು ಲಿಂಗಾಯತ ಒಳಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಗಾಗಿ 3 ವರ್ಷಗಳಿಂದ ನಿರಂತರ ಹೋರಾಟ ಮಾಡಲಾಗುತ್ತಿದೆ. ಆದರೆ, ಹಿಂದಿನ ಸರ್ಕಾರ ವಿಧಾನಸಭೆ ಚುನಾವಣೆಗೂ ಕೆಲ ದಿನ ಮೊದಲು ಹೊಸದಾಗಿ ಸೃಷ್ಟಿಸಿದ 2 ಡಿ ವರ್ಗದಲ್ಲಿ ಮೀಸಲಾತಿ ಕಲ್ಪಿಸಲಾಯಿತು. ಚುನಾವಣೆಯ ನಂತರ ಸರ್ಕಾರ ಬದಲಾವಣೆಯಾಯಿತು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದರೂ ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ ಎಂದರು.
ಈ ಹಿನ್ನೆಲೆಯಲ್ಲಿ ಡಿ. 13ರಂದು ಬೆಳಗಾವಿಯ ಕಿತ್ತೂರು ಚೆನ್ಮಮ್ಮ ವೃತ್ತದಲ್ಲಿ ಹೋರಾಟ ನಡೆಸಿ ಅಲ್ಲಿಂದ ಪಾದಯಾತ್ರೆ ಮೂಲಕ ಸುವರ್ಣ ವಿಧಾನಸೌಧಕ್ಕೆ ತೆರಳಿ ಸರ್ಕಾರದ ಗಮನ ಸೆಳೆಯಲಾಗುವುದು. ಆಡಳಿತಾರೂಢ ಪಕ್ಷದಲ್ಲಿನ ಸಚಿವರು, ಶಾಸಕರು ತಮ್ಮ ಇತಿಮಿತಿಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಮುಖಮಂತ್ರಿಗಳು ಸ್ಪಷ್ಟ ತೀಮÁðನ ಕೈಕೊಳ್ಳದಿರುವುದರಿಂದ ಅನಿವಾರ್ಯವಾಗಿ ಹೋರಾಟಕ್ಕೆ ತೀರ್ಮಾನಿಸಲಾಗಿದೆ ಎಂದರು.