ಜಿಲ್ಲೆ

ಪಕ್ಷ ಬಿಡುವ ವದಂತಿ ಅಲ್ಲಗಳೆದ ಜೆಸಿಎಂ

ತುಮಕೂರು: ರಾಜ್ಯ ಹಾಗೂ ಜಿಲ್ಲಾ ಬಿಜೆಪಿ ಕೆಲವು ನಾಯಕರ ಮೇಲೆ ಮುನಿಸಿಕೊಂಡಿರುವ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಬಿಜೆಪಿ ತೊರೆಯುವ ವದಂತಿಯನ್ನು ಅಲ್ಲಗಳೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದಾರೆ. "ಬಿಜೆಪಿ ತೊರೆದು ಕಾಂಗ್ರೆಸ್​ ಸೇರುತ್ತೇನೆ ಎಂಬುದು ಕೇವಲ ಊಹಾಪೋಹ, ಹೇಮಾವತಿ ಎಕ್ಸ್​ಪ್ರೆಸ್​ ಲಿಂಕ್​ ಕೆನಾಲ್​ ಹೋರಾಟದಲ್ಲಿ ಭಾಗವಹಿಸುವಂತೆ ಕೆಲವರು ಬಂದು ಮಾತನಾಡಿದರು. ನನಗೆ ಅಧಿಕಾರ ಇರುವವರೆಗೂ ಜಿಲ್ಲೆಗೆ ಯಾವ ರೀತಿಯಿಂದಲೂ ಅನ್ಯಾಯವಾಗಲು ಬಿಡದಂತೆ ನ್ಯಾಯ ಕೊಟ್ಟಿದ್ದೇನೆ' ಎಂದು ಪೋಸ್ಟ್​ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರು ಎಂದು ಜಿಲ್ಲಾ ಬಿಜೆಪಿಯಿಂದ ದೂರು ನೀಡಲಾಗಿರುವ ಹಿನ್ನೆಲೆಯಲ್ಲಿ ಕೋಪಗೊಂಡಿರುವ ಜೆ.ಸಿ.ಮಾಧುಸ್ವಾಮಿ, ಪಕ್ಷದ ಚಟುವಟಿಕೆಗಳಿಂದ ದೂರವಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಮಿತ್​ ಷಾ ಸೂಚನೆ ಮೇರೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಚಾರ ನಡೆಸಿದ್ದು, ಪಕ್ಷ ವಿರೋಧ ಚಟುವಟಿಕೆ

ಎಂದು ಹೇಗೆ ಪತ್ರ ಬರೆದಿದ್ದಾರೆ ಎಂದು ಆಪ್ತರ ಬಳಿ ಹೇಳಿಕೊಂಡಿರುವ ಮಾಧುಸ್ವಾಮಿ ಬಿಜೆಪಿ ಬಿಡುವ ಯಾವುದೇ ಪ್ರಸ್ತಾಪವಿಲ್ಲ ಎನ್ನಲಾಗಿದೆ.