ಚಾಮರಾಜನಗರ: ಪಕ್ಷಕ್ಕಾಗಿ ತ್ಯಾಗ ಮಾಡಿ, ಸಂಘಟನೆಯನ್ನು ಬಲಪಡಿಸಿದ ಮಹನೀಯರನ್ನು ಸನ್ಮಾನಿಸುವ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಪಕ್ಷಕ್ಕಾಗಿ ದುಡಿದ ಹಿರಿಯ ಮುಖಂಡರನ್ನು ಸನ್ಮಾನಿಸಿ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ದೇಶಕ್ಕಾಗಿ ಹೋರಾಡಿ ಪ್ರಾಣ ತೆತ್ತ ಅನೇಕ ಹಿರಿಯರಿದ್ದಾರೆ. ಇವರು ದಶಕಗಳ ಕಾಲ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ತಮ್ಮ ಜೀವವನ್ನು ಮುಡಿಪಾಗಿಟ್ಟಿದ್ದಾರೆ ಎಂದರು.
ಜಿಲ್ಲಾ ಕಾಂಗ್ರಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ಮಾತನಾಡಿ, ಕಾಂಗ್ರೆಸ್ ಇತಿಹಾಸವನ್ನು ಹೊಂದಿರುವ ಪಕ್ಷವಾಗಿದ್ದು, ಪಕ್ಷದಿಂದ ಪ್ರಧಾನಿಗಳಾಗಿರುವ ಅನೇಕರು ದೇಶದ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಕಾರ್ಯಗತ ಮಾಡಿಕೊಂಡು ಬಂದಿದ್ದಾರೆ. ಹಸಿರು ಕ್ರಾಂತಿ, ಪಂಚವಾರ್ಷಿಕ ಯೋಜನೆ, ಆಹಾರ ಭದ್ರತೆ, ಉದ್ಯೋಗ ಖಾತರಿ ಯೋಜನೆ, ಅನ್ನದಾಸೋಹ ಸೇರಿದಂತೆ ಹಲವಾರು ಪ್ರಗತಿಪರ ಕಾರ್ಯಕ್ರಮ ರೂಪಿಸಿಕೊಂಡು ಬಂದಿದ್ದಾರೆ ಎಂದರು.
ಪಕ್ಷದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ಮುಖಂಡರಾದ ಮಹದೇವಯ್ಯ, ನಾರಾಯಣ್ ನಾಯಕ, ಗುರುಮಲ್ಲಪ್ಪ, ಅಂಕಶೆಟ್ಟಿ, ಅಲೀಖಾನ್ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಲತಾ ಜತ್ತಿ, ಜಿಲ್ಲಾ ಕಾಂಗ್ರಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಕೆಪಿಸಿಸಿ ಸದಸ್ಯ ಸೈಯದ್ ರಫೀ, ಜಿಪಂ ಮಾಜಿ ಸದಸ್ಯ ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರತ್ರಿಕಾ ಕಾರ್ಯದರ್ಶಿ ವಕೀಲ ಅರುಣ್‌ಕುಮಾರ್, ನಗರಸಭೆ ಸದಸ್ಯರಾದ ಚಿನ್ನಮ್ಮ, ಕಲಾವತಿ, ಭಾಗ್ಯಮ್ಮ, ಮುಖಂಡರಾದ ಆರ್. ಮಹದೇವ, ಎ.ಎಸ್. ಗುರುಸ್ವಾಮಿ, ಮಹಮದ್ ಅಜ್ಗರ್ ಮುನ್ನಾ ಇತರರು ಹಾಜರಿದ್ದರು.