ಹಾಸನ: ಜೂ.03 ರಂದು ನಡೆಯುವ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಜಿಲ್ಲೆಗಳಲ್ಲಿ ಇರುವಂತಹ ಶಿಕ್ಷಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ನನಗೆ ಮತ ನೀಡುವ ಮೂಲಕ ನನ್ನನ್ನ ಜಯಶೀಲರನ್ನಾಗಿ ಮಾಡಬೇಕು ಎಂದು ಪಕ್ಷೇತರ ಅಭ್ಯರ್ಥಿ ನಾಗಮಲ್ಲೇಶ್ ಮನವಿ ಮಾಡಿದರು.
ಉಪನ್ಯಾಸಕನಾಗಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಆಗಿರುವ ನಾನು ಶಿಕ್ಷಕರ ಸಮಸ್ಯೆಗಳು ಅರಿವಿರುವುದರಿಂದ ವಿಧಾನ ಪರಿಷತ್ತಿನಲ್ಲಿ ಗಟ್ಟಿ ಧ್ವನಿಯಿಂದ ಮಾತನಾಡಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು
ನಾನು ಉಪನ್ಯಾಸಕನಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ಆನಂತರ ಪ್ರಾಂಶುಪಾಲರಾಗಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಕೆಲಸ ಮಾಡಿದ್ದೇನೆ. ನನ್ನ ಸೇವಾ ಅವಧಿಯಲ್ಲಿ ಹಲವು ಶಿಕ್ಷಕರು ಮತ್ತು ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಾಕಷ್ಟು ಸಹಾಯ ಮಾಡಿದ್ದೇನೆ. ಆದ್ದರಿಂದ ಈ ಬಾರಿ ನನಗೆ ಒಂದು ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿದರು.
ನಾನು ಮೂಲತಹ ಮೈಸೂರು ಜಿಲ್ಲೆಯವನಾಗಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ನಾನು ಸೇವೆ ಸಲ್ಲಿಸಿದ್ದೇನೆ. ಕಳೆದ ವರ್ಷ ನಿವೃತ್ತಿ ಹೊಂದಿದ ನಂತರ ಶಿಕ್ಷಕರು ಮತ್ತು ಉಪನ್ಯಾಸಕರ ಧ್ವನಿಯಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಳದ ಬಾರಿಯ ಚುನಾವಣೆಯ ಪರಾಜಿತ ಅಭ್ಯರ್ಥಿ ಚನ್ನಕೇಶವ ಮೂರ್ತಿ, ಮಂಜುನಾಥ್ ಇದ್ದರು