ಜಿಲ್ಲೆ

ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಲಿ

ಗೋಕಾಕ: ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ವಿನೋದ ಪಾಟೀಲ ಹೇಳಿದರು. ನಗರದ ಶ್ರೀ ಲಕ್ಷ$್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್​ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕ್ರೀಡೆ ಹಾಗೂ ಸಾಂಸತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆ ಹಾಗೂ ಸಾಂಸತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮನೋದೈಹಿಕ ಬೆಳವಣಿಗೆ ಸಾಧ್ಯ ಎಂದರು. ಆಡಳಿತಾಧಿಕಾರಿ ಬಿ.ಕೆ.ಕುಲಕರ್ಣಿ, ಪ್ರಾಚಾರ್ಯ ಎಚ್​.ಎಸ್​.ಅಡಿಬಟ್ಟಿ, ಉಪನ್ಯಾಸಕರಾದ ಪಿ.ಡಿ.ಪಾಂಚಾಳ, ವಿ.ಎಂ.ಹಡಕರ, ವಿದ್ಯಾರ್ಥಿ ಪ್ರತಿನಿಧಿಗಳಾದ ವೇದಾಂತ ಬಡಿಗೇರ, ಜಯಶ್ರೀ ಹಿರೇಮಠ ಇದ್ದರು.