ಜಿಲ್ಲೆ

ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಲಿ

ವಿದ್ಯಾ ಶೆಟ್ಟನಗೌಡ್ರ

ಮಾಂಜರಿ: ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಚಿಕ್ಕೋಡಿ ಆರ್‌ಡಿಪಿಯು ಕಾಲೇಜು ಉಪನ್ಯಾಸಕ ಎನ್.ವಿ. ಶಿರಗಾಂವಕರ ಹೇಳಿದರು.

ಸಮೀಪದ ಅಂಕಲಿ ಗ್ರಾಮದಲ್ಲಿರುವ ಕೆಎಲ್‌ಇ ಸಂಸ್ಥೆಯ ಪದವಿ ಮಹಾದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಬಿಎ, ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಸುರೇಶ ಪಾಟೀಲ ಮಾತನಾಡಿದರು.

ಪ್ರಾಚಾರ್ಯ ಎಂ.ಎಸ್. ಕಾನಡೆ, ಪ್ರೊ. ಎನ್. ಆರ್. ಉಮರಾಣಿ, ಪ್ರೊ. ಎ.ಕೆ. ಪಾಟೀಲ, ಅಶ್ವಿನಿ ಜೋಗೊಜೆ, ಸಾಕ್ಷಿ ಪಾಟೀಲ, ಅಕ್ಷತಾ ಮಿರ್ಜೆ ಇತರರಿದ್ದರು.