ಜಿಲ್ಲೆ

ಪಿಡಿಒ ಪುಟ್ಟರಾಜು, ಸುರೇಶ್‌ಗೆ ಬೀಳ್ಕೊಡುಗೆ

ಗೋಣಿಕೊಪ್ಪ: ಪೊನ್ನಂಪೇಟೆ ಗ್ರಾಮ ಪಂಚಾಯಿತಿಯಲ್ಲಿ ಏಳು ವರ್ಷಗಳಿಂದ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ಗೋಣಿಕೊಪ್ಪ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಕಾರಣ ವರ್ಗಾವಣೆಗೊಂಡ ಪುಟ್ಟರಾಜು ಅವರಿಗೆ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಇತ್ತೀಚೆಗೆ ಬೀಳ್ಕೊಡುಗೆ ನೀಡಲಾಯಿತು.

ಅಲ್ಲದೆ, ಕಳೆದ ಹತ್ತು ವರ್ಷಗಳಿಂದ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸಿ ಇದೀಗ ಬೇರೆಡೆಗೆ ವರ್ಗಾವಣೆಗೊಂಡಿರುವ ಸುರೇಶ್ ಅವರಿಗೆ ಕೂಡ ಇದೇ ಸಂದರ್ಭ ಬೀಳ್ಕೊಡುಗೆ ನೀಡಲಾಯಿತು.

ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಿರ ಹರೀಶ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಡಿಒ ಪುಟ್ಟರಾಜು ದಂಪತಿ ಮತ್ತು ಸುರೇಶ್ ಅವರನ್ನು ಗೌರವಿಸಲಾಯಿತು.

ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಿರ ಹರೀಶ್, ಉಪಾಧ್ಯಕ್ಷ ಆಲೀರ ಎಂ. ರಶೀದ್, ಪೊನ್ನಂಪೇಟೆ ಗ್ರಾ.ಪಂ.ಮಾಜಿ ಅಧ್ಯಕ್ಷೆ ಸುಮಿತಾ, ಗಿರಿಜಾ, ದಶಮಿ ಇತರರು ಇದ್ದರು.