ಜಿಲ್ಲೆ

ಪಡಿತರ ಆಹಾರ ಪದಾರ್ಥ ಮಾರಾಟ ಮಾಡದಂತೆ ಸೂಚನೆ

ಚಾಮರಾಜನಗರ: ನ್ಯಾಯಬೆಲೆ ಅಂಗಡಿ ಮೂಲಕ ಉಚಿತವಾಗಿ ಪಡೆದ ಅಕ್ಕಿ ಮತ್ತು ರಾಗಿಯನ್ನು ಹೆಚ್ಚಿನ ಬೆಲೆಗೆ ಪುನಹ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಆಹಾರ ಭದ್ರತಾ ಕಾಯ್ದೆ ಅನ್ವಯ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಅಕ್ಕಿ ಮತ್ತು ರಾಗಿಯನ್ನು ನ್ಯಾಯಬೆಲೆ ಅಂಗಡಿ ಮೂಲಕ ಪಡಿತರದಾರರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ. ಈ ರೀತಿ ಉಚಿತವಾಗಿ ಪಡೆದ ಅಕ್ಕಿ ಮತ್ತು ರಾಗಿಯನ್ನು ಹೆಚ್ಚಿನ ಬೆಲೆಗೆ ಪುನಹ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೆಶಕರಾದ ಯೋಗಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.