ಪಡಿತರ ಚೀಟಿ ತಿದ್ದುಪಡಿಗೆ ನಿಗದಿಪಡಿಸಲಾದ ದಿನಾಂಕವನ್ನು ವಿಸ್ತರಿಸಬೇಕು ಎಂದು ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಸಿಪಿಐಎಂಎಲ್ ರೆಡ್‌ಸ್ಟಾರ್‌ನಿಂದ ಸೋಮವಾರ ಮನವಿ ಸಲ್ಲಿಸಲಾಯಿತು. ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಜಿ.ಅಮರೇಶ, ಅಜೀಜ್ ಜಾಗೀರದಾರ್, ಸೈಯದ್ ಅಬ್ಬಾಸ್ ಅಲಿ, ಅಡಿವೆಪ್ಪ, ಬದ್ರಿ ಇದ್ದರು. 
ಜಿಲ್ಲೆ

ಪಡಿತರ ಚೀಟಿ ತಿದ್ದುಪಡಿ ಸಮಯ ವಿಸ್ತರಿಸಿ

ರಾಯಚೂರು: ಪಡಿತರ ಚೀಟಿಯ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗಾಗಿ ಸರ್ವರ್ ಸಮಸ್ಯೆ ಎದುರಾಗಿದ್ದು, ತಿದ್ದುಪಡಿಗಾಗಿ ನಿಗದಿಪಡಿಸಲಾದ ಅವಯನ್ನು ವಿಸ್ತರಿಸಬೇಕು ಎಂದು ಸಿಪಿಐಎಂಎಲ್ ರೆಡ್‌ಸ್ಟಾರ್ ಒತ್ತಾಯಿಸಿದೆ.
ಪಕ್ಷದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಸೋಮವಾರ ಮನವಿ ಸಲ್ಲಿಸಿ, ಆ.18 ರಿಂದ 23ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಆದರೆ ಮಧ್ಯಾಹ್ನ 12 ರಿಂದ 3ರವರೆಗೆ ಅರ್ಜಿ ಹಾಕಲು ಅವಕಾಶ ನೀಡಿದ್ದು ಸರಿಯಲ್ಲ ಎಂದು ದೂರಿದರು.
ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಸರ್ವರ್ ಸಮಸ್ಯೆಯಿಂದ ಪಡಿತರ ಚೀಟಿ ತಿದ್ದುಪಡಿ ಸಾಧ್ಯವಾಗುತ್ತಿಲ್ಲ. ಬಡವರು, ಕೂಲಿ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಸೈಬರ್ ಕೇಂದ್ರಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ. ಇದರಿಂದ ಅವರ ದುಡಿಮೆಗೆ ಸಮಸ್ಯೆಯಾಗಿದೆ.
ಕಾರಣ ಪಡಿತರ ಚೀಟಿ ತಿದ್ದುಪಡಿ ದಿನಾಂಕವನ್ನು ಒಂದು ವಾರ ವಿಸ್ತರಣೆ ಮಾಡಬೇಕು ಮತ್ತು ತಿದ್ದುಪಡಿ ಅರ್ಜಿ ಹಾಕಲು ದಿನದ 24 ಗಂಟೆ ಅವಕಾಸ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಸರ್ವರ್ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಸೈಬರ್ ಕೇಂದ್ರಗಳ್ಲಲಿ ಹಣ ಸುಲಿಗೆ ನಿಲ್ಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಜಿ.ಅಮರೇಶ, ಅಜೀಜ್ ಜಾಗೀರದಾರ್, ಸೈಯದ್ ಅಬ್ಬಾಸ್ ಅಲಿ, ಅಡಿವೆಪ್ಪ, ಬದ್ರಿ ಇದ್ದರು.