ಜಿಲ್ಲೆ

ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ 11.06 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಹಿತ ಆರೋಪಿ ಬಂಧನ

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಳಗಿನ ತೋಕೂರು ಎಂಬಲ್ಲಿ ಮನೆಯೊಂದರಿಂದ ಕಳ್ಳತನವಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಕೆಲವೇ ಘಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ಆತ ಕಳವು ಮಾಡಿದ್ದ 11.06 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಕಳ್ಳತನ ಮಾಡಿದ ಆರೋಪಿ ಅದೇ ಮನೆಯಲ್ಲಿ ವಾಸವಿದ್ದು, ಮನೆಯವರ ವಿಶ್ವಾಸ ಗಳಿಸಿದ್ದ. ಮನೆಯವರು 2 ದಿನ ಊರಿನಲ್ಲಿ ಇಲ್ಲದೇ ಇದ್ದ ಸಂದರ್ಭ ಮನೆಯ ಹಂಚು ತೆಗೆದು ಒಳ ಪ್ರವೇಶಿಸಿ ಕಳ್ಳತನ ಮಾಡಿದ್ದ. ಆರೋಪಿ ಸಾಲ ಮಾಡಿಕೊಂಡಿದ್ದು, ಹಣಕಾಸಿನ ತೊಂದರೆಯಲ್ಲಿದ್ದುದರಿಂದ ಕಳ್ಳತನ ಮಾಡಿರುವುದಾಗಿ ಪೊಲೀಸರು ವಿಚಾರಣೆ ವೇಳೆ ಹೇಳಿದ್ದಾನೆ.