ಚನ್ನಗಿರಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಂತೆಬೆನ್ನೂರು ನಿವಾಸಿ ನಾಗರಾಜ್ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಂದು ಶುಕ್ರವಾರ ಪೊಲೀಸರಿಗೆ ಶರಣಾಗಿದ್ದಾನೆ.
ಸುಲೋಚನಮ್ಮ (39) ಕೊಲೆಯಾದವರು. ಕಳೆದ ಕೆಲ ದಿನಗಳಿಂದ ಕೌಟುಂಬಿಕ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನ ಮತ್ತೆ ಪತಿ-ಪತ್ನಿಯ ನಡುವೆ ಜಗಳ ನಡೆದಿದೆ. ಸಿಟ್ಟಿನ ಭರದಲ್ಲಿ ನಾಗರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ತೀವ್ರ ಹಲ್ಲೆಯಿಂದ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಕ್ಷಣ ಪತಿ ಮಂಚದ ಕೆಳಗೆ ಮೃತದೇಹ ಮುಚ್ಚಿಟ್ಟು ನೇರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಕುರಿತು ಪುತ್ರ ಮಧು ಠಾಣೆಯಲ್ಲಿ ದೂರು ನೀಡಿದ್ದಾರೆ.