ಜಿಲ್ಲೆ

ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಸಚಿವ ಸಿ.ಪಿ.ಯೋಗೀಶ್ವರ್ ಚಾಲನೆ ಐದು ಲಕ್ಷ ರೂ.ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್‌ ಸಹಭಾಗಿತ್ವದಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಶನಿವಾರ ಚಾಲನೆ ನೀಡಿ, ವೈಯಕ್ತಿಕ ನೆಲೆಯಲ್ಲಿ ಐದು ಲಕ್ಷ ರೂ. ಘೋಷಣೆ ಮಾಡಿದರು.
ಮಾಜಿ ಸಚಿವ ಜೆ.ಕೃಷ್ಣ ಪಾಲೆಮಾರ್ ಅವರೂ ನಿಧಿಗೆ ಐದು ಲಕ್ಷ ರೂ.ಘೋಷಿಸಿದರು.
ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಪಾಲಿಕೆ ವತಿಯಿಂದ ಸಹಕಾರ ನೀಡುವ ಭರವಸೆ ನೀಡಿದರು.
ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಉಪಸ್ಥಿತರಿದ್ದರು.