ಚಿತ್ರದುರ್ಗ: ಕರ್ನಾಟಕ ಮಾಧ್ಯಮ ಅಕಾಡೆಮಿ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ 28 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳಿಂದ ಆ.26ರೊಳಗೆ ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿನಲ್ಲಿ ಐವರು ಮಹಿಳಾ ಅಭ್ಯರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳಲ್ಲಿ 2 ತಿಂಗಳ ತರಬೇತಿಗೆ ಮಾಸಿಕ ತಲಾ 20 ಸಾವಿರ ರೂ. ಶಿಷ್ಯವೇತನ ನೀಡಲಾಗುವುದು. ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳ ಆಯ್ಕೆಗೆ ಅಕಾಡೆಮಿ ಅರ್ಹತಾ ಪರೀಕ್ಷೆ ನಡೆಸಲಿದೆ. ಪರೀಕ್ಷೆ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.