ಚಾಮರಾಜನಗರ: 2024-25ನೇ ಸಾಲಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಚಾಮರಾಜನಗರ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮ ಹಾಗೂ ಕ್ಷೇತ್ರ ಪ್ರಚಾರ ಕುರಿತ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ/ ಜನ್ಮ ದಿನಾಂಕಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ, ಪದವಿ/ಸ್ನಾತ್ತಕೋತ್ತರ ಪದವಿ ಅಂಕಪಟ್ಟಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಇನ್ನಿತರ ಪೂರಕ ದಾಖಲೆಗಳು, ಪ್ರಮಾಣ ಪತ್ರದ ನಕಲನ್ನು ದೃಢೀಕರಿಸಿ ನ.27ರೊಳಗೆ ಹಿರಿಯ ಸಹಾಯಕ ನಿರ್ದೆಶಕರು, ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಜಿಲ್ಲಾ ಆಡಳಿತ ಭವನದ ಆವರಣ, ಬಿ. ರಾಚಯ್ಯ ಜೋಡಿ ರಸ್ತೆ, ಚಾಮರಾಜನಗರ-571313 ಇಲ್ಲಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ.