ಉಳ್ಳೂರಿನಲ್ಲಿ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಕ್ಕಳು ‘ಸೇವ್ ಗರ್ಲ್ ಚೈಲ್ಡ್’ ಕುರಿತು ರೂಪಕ ಪ್ರಸ್ತುತ ಪಡಿಸಿದರು. 
ಜಿಲ್ಲೆ

ಪತ್ರಿಭಾ ಪೋಷಣೆಯಲ್ಲಿ ಶಿಕ್ಷಕರ ಪಾತ್ರ ಹಿರಿದು

ತ್ಯಾಗರ್ತಿ: ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಿದರೆ ಅವರ ಪ್ರತಿಭೆ ಸಮಾಜಕ್ಕೆ ತಿಳಿಯುತ್ತದೆ ಎಂದು ಉಳ್ಳೂರು ಸಿಗಂದೂರೇಶ್ವರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎನ್.ಕೃಷ್ಣಮೂರ್ತಿ ಬಿಳಗಲ್ಲೂರು ಹೇಳಿದರು.
ಉಳ್ಳೂರು ಸಿಗಂದೂರೇಶ್ವರಿ ಕಾಲೇಜಿನ ಆವರಣದಲ್ಲಿ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರತಿಭೆ ಎಲ್ಲರಲ್ಲೂ ಇರುತ್ತದೆ. ಅದನ್ನು ಹೊರತರುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಬಿಇಒ ಪರಶುರಾಮಪ್ಪ ಮಾತನಾಡಿದರು. ಉಳ್ಳೂರು ಕ್ಲಸ್ಟರ್ ಮಟ್ಟದ ಹದಿನೈದು ಶಾಲೆಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಗಣ್ಯರನ್ನು ಸನ್ಮಾನಿಸಲಾಯಿತು.
ಮುಖ್ಯಶಿಕ್ಷಕಿ ರೂಪಾ ದಿವಾಕರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗನ್ನಾಥ, ಪ್ರಮುಖರಾದ ಮಂಜಪ್ಪ, ಮಲ್ಲಿಕಾರ್ಜುನ್, ನಳಿನಾ ಇತರರಿದ್ದರು.