ಸೊರಬ: ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯರಾಗಿ ಅಕಾರ ವಹಿಸಿಕೊಂಡ ಡಾ. ಕೆ.ಶಿವರಾಯ ಅವರನ್ನು ತಾಲೂಕು ಬಿಜೆಪಿ ಉಪಾಧ್ಯಕ್ಷ ಡಾ. ಜ್ಞಾನೇಶ್ ಗೌರವಿಸಿದರು. ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಆರಂಭವಾದ ಈ ಸರ್ಕಾರಿ ಪದವಿ ಕಾಲೇಜು ಹಲವರ ಬದುಕಿಗೆ ದಾರಿದೀಪವಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಸೌಲಭ್ಯ ಒದಗಿಸಲು ಮತ್ತು ಹೊಸ ಹೊಸ ಕೋರ್ಸ್‌ಗಳನ್ನು ಆರಂಭ ಮಾಡುವ ಮೂಲಕ ವಿದ್ಯಾರ್ಥಿಗಳು ಬೇರೆ ಬೇರೆ ತಾಲೂಕುಗಳಿಗೆ ಹೋಗುವುದನ್ನು ತಪ್ಪಿಸಿ, ಇಲ್ಲಿಯೇ ಶಿಕ್ಷಣ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಬಿಜೆಪಿ ಮುಖಂಡ ಪಾಣಿ ರಾಜಪ್ಪ, ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ನಾಗರಾಜ್ ಗುತ್ತಿ, ದೇವರಾಯ್, ಯಶೋಧರ ಇತರರಿದ್ದರು.