ಬಾಗಲಕೋಟೆ ನಗರದ ಬಿವಿವಿ ಸಂಘದ ಮೆಡಿಕಲ್ ಕಾಲೇಜಿನ ಶಿವಾಲಯದಲ್ಲಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ. ಚರಂತಿಮಠ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಬೇವೂರ, ಮೆಡಿಕಲ್ ಕಾಲೇಜ್ ಪ್ರಾಚಾರ್ಯೆ ಡಾ.ಭುವನೇಶ್ವರಿ ಸಿ. ಯಳಮಲಿ ಇತರರು ಇದ್ದರು. 
ಜಿಲ್ಲೆ

ಪರಮೇಶ್ವರ ಸಕಲರಿಗೂ ಒಳಿತು ಮಾಡಲಿ

ಬಾಗಲಕೋಟೆ: ಮಹಾಶಿವರಾತ್ರಿ ನಿಮಿತ್ಯ ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ಆವರಣದಲ್ಲಿರುವ ಶಿವಾಲಯದಲ್ಲಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ. ಚರಂತಿಮಠ ಬುಧವಾರ ಮಹಾಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಅನೇಕ ವರ್ಷಗಳಿಂದ ವೈದ್ಯಕೀಯ ಮಹಾವಿದ್ಯಾಲಯದ ಶಿವಾಲಯದಲ್ಲಿ ಪ್ರತಿ ಮಹಾಶಿವರಾತ್ರಿಯಂದು ಮಹಾಪೂಜೆ ಮತ್ತು ಸಂಗೀತ ಶಿವರಾತ್ರಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗಲಾಗುತ್ತಿದೆ. ಪರಮಾತ್ಮನು ಸಕಲರಿಗೂ ಸನ್ಮಂಗಳ ಉಂಟು ಮಾಡಲಿ ಮತ್ತು ನಾಡಿನಲ್ಲಿ ಸಕಲ ಶಾಂತಿ-ಸೌಹಾರ್ದತೆ ನೆಲೆಸಲು ಅಂತ ಪ್ರಾರ್ಥಿಸಿದರು.

ಸಾವಿರಾರು ಭಕ್ತರು ಶಿವಾಲಯಕ್ಕೆ ಆಗಮಿಸಿ ಶಿವನ ದರ್ಶನ ಪಡೆದು ಪುನೀತರಾದರು. ಶಿವನ ಮೂರ್ತಿಗೆ ಮಾಡಿದ ವಿಶೇಷ ಅಲಂಕಾರ ಕಣ್ಮನ ಸೆಳೆಯಿತು. ನಗರದ ಸಾರ್ವಜನಿಕರು ಸರತಿ ಸಾಲಿನಲ್ಲಿ ಬಂದು ಶಿವನ ದರ್ಶನ ಪಡೆದರು.

ಈ ಸಂರ್ದರ್ಭದಲ್ಲಿ ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ. ಸಜ್ಜನ (ಬೇವೂರ), ಸದಸ್ಯರಾದ ಮಹೇಶ ಅಂಗಡಿ, ರಾಜು ಪಾಟೀಲ, ಕುಮಾರ ಜಿಗಜಿನ್ನಿ, ಮೆಡಿಕಲ್ ಕಾಲೇಜ್ ಪ್ರಾಚಾರ್ಯೆ ಡಾ.ಭುವನೇಶ್ವರಿ ಸಿ. ಯಳಮಲಿ, ವೈದ್ಯಕೀಯ ಅಽÃಕ್ಷಕ ಡಾ.ಶ್ರೀರಾಮ ಕೋರಾ ಇದ್ದರು.