ಚಿಕ್ಕಮಗಳೂರು: ಜಿಲ್ಲೆಯ ಹಿರಿಯ ಭಜನಾ ಕಲಾವಿದ ಬೆಳವಾಡಿಯ ಬಿ.ಪಿ.ಪರಮೇಶ್ವರಪ್ಪ ಅವರಿಗೆ ಪ್ರತಿಷ್ಠಿತ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಬೀದರ್‌ನ ಶ್ರೀಚನ್ನಬಸವ ಪಟ್ಟದೇವರ ರಂಗಮAದಿರದಲ್ಲಿ ನಡೆದ ಕರ್ನಾಟಕ ಜಾನಪದ ಪರಿಷತ್ತಿನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬಿ.ಪಿ. ಪರಮೇಶ್ವರಪ್ಪ ಅವರಿಗೆ ಕನ್ನಡ ಮತ್ತು ಸಂಸ್ಕÈತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಮತ್ತು ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಪ್ರಶಸ್ತಿ ಪ್ರದಾನ ಮಾಡಿದರು.
ಬೆಳವಾಡಿಯಲ್ಲಿ ಶ್ರೀ ಬಸವೇಶ್ವರ ಭಜನಾ ಕಲಾ ಸಂಘವನ್ನು ಸ್ಥಾಪಿಸಿ. ತಮ್ಮದೇ ಆದ ತಂಡವನ್ನು ರಚಿಸಿಕೊಂಡು ಕಳೆದ ೫೦ ವರ್ಷಗಳಿಂದ ಮನೆ ಮನೆಗೆ ತೆರಳಿ ಹಬ್ಬ ಹರಿ ದಿನಗಳು,ಜಾತ್ರೆ ಉತ್ಸವಗಳು ಸೇರಿದಂತೆ ಅನೇಕ ಸಭೆ ಸಮಾರಂಭಗಳಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿರುವ ಪರಮೇಶ್ವರಪ್ಪ ಅವರು ತಮ್ಮ ಇಳಿ ವಯಸ್ಸಿನಲ್ಲೂ ಅದನ್ನು ಮುಂದುವರೆಸಿದ್ದಾರೆ.
೨೦೨೩ರಲ್ಲಿ ನಗರದಲ್ಲಿ ನಡೆದ ಜಿಲ್ಲಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಮ್ಮೇಳನವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಪರಮೇಶ್ವರಪ್ಪ ಅವರಿಗೆ ಜಿಲ್ಲಾ ಜಾನಪದ ಸಿರಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ,ಪುರಸ್ಕಾರಗಳು ದೊರೆತಿವೆ.