ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಗುರುವಾರ ಏರ್ಪಡಿಸಿದ್ದ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನವನ್ನು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್.ವಿ.ಸುರೇಶ ಉದ್ಘಾಟಿಸಿದರು. ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ , ಕುಲಸಚಿವ ಡಾ.ಎಂ.ವೀರನಗೌಡ, ಕೃಷಿ ಸಚಿವಾಲಯದ ವಿಶೇಷ ಕರ್ತವ್ಯಾಕಾರಿ ಡಾ.ಎ.ಬಿ.ಪಾಟೀಲ್, ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯ ಡಿ.ಮಲ್ಲಿಕಾರ್ಜುನ, ವಿವಿಯ ವಿವಿಧ ವಿಭಾಗಗಳ ನಿರ್ದೇಶಕರಾದ ಡಾ.ಗುರುರಾಜ ಸುಂಕದ, ಡಾ.ಬಿ.ಕೆ.ದೇಸಾಯಿ, ಡಾ.ಎಸ್.ಬಿ.ಗೌಡಪ್ಪ ಇದ್ದರು. 
ಜಿಲ್ಲೆ

ಪರಿಣಾಮಕಾರಿ ಅಧ್ಯಯನ ಇಂದು ಅತ್ಯವಶ್ಯ

ರಾಚಯ್ಯ ಸ್ವಾಮಿ

ರಾಯಚೂರು: ರೈತರ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ನಡೆಸುವ ಸಂಶೋಧನೆಗಳು ಪರಿಣಾಮಕಾರಿ ಲಿತಾಂಶ ನೀಡುವಂತೆ ಅಧ್ಯಯನ ನಡೆಸುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಬೆಂಗಳೂರು ಕೃಷಿ ವಿಜ್ಞಾನಗಳ ವಿವಿ ಕುಲಪತಿ ಡಾ.ಎಸ್.ವಿ.ಸುರೇಶ ಹೇಳಿದರು.
ಸ್ಥಳೀಯ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಸಂಶೋಧನೆಗಳು ಸಮಾಜಕ್ಕೆ ಯಾವ ರೀತಿಯ ಕೊಡುಗೆ ನೀಡುತ್ತವೆ. ಸಮಾಜದ ಬೆಳವಣಿಗೆ ಉಪಯುಕ್ತವಾಗುತ್ತವೆ ಎನ್ನುವುದನ್ನು ಸಂಶೋಧನಾ ವಿದ್ಯಾರ್ಥಿಗಳು ಮನವರಿಕೆ ಮಾಡಿಕೊಳ್ಳಬೇಕು ಎಂದರು.
ದೇಶದಲ್ಲಿ ಹಿಂದೆ ಆಹಾರದ ಕೊರತೆ ಎದುರಿಸಲಾಗುತ್ತಿತ್ತು. ಆದರೆ ಇಂದು ಆಹಾರವನ್ನು ವಿದೇಶಗಳಿಗೆ ರ್ತು ಮಾಡುವ ಹಂತಕ್ಕೆ ತಲುಪಿದ್ದೇವೆ. ಜನಸಂಖ್ಯೆ ಹೆಚ್ಚಳ, ಹಿಡುವಳಿಗಳ ವಿಭಜನೆ, ಸಣ್ಣ ಮತ್ತು ಅತಿ ಸಣ್ಣ ರೈತರ ಕಡೆಗಣನೆಗೆ ಸೇರಿದಂತೆ ಅನೇಕ ಸಮಸ್ಯೆಗಳಿಂದಾಗಿ ಉತ್ಪಾದನೆ ಕಡಿಮೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಸಂಶೋಧನೆ ನಡೆಯಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ ಮಾತನಾಡಿ, ಸ್ನಾತಕೋತ್ತರ ಶಿಕ್ಷಣ ಆಳವಾದ ಜ್ಞಾನ ಮತ್ತು ಗ್ರಹಿಕೆಯೊಂದಿಗೆ ನಿರ್ದಿಷ್ಟ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಪರಿಣಾಮಕಾರಿಯಾದ ಹಂತವಾಗಿದೆ. ಅದನ್ನು ಗಮನದಲ್ಲಿಟ್ಟುಕೊಂಡು ಸ್ನಾತಕೋತ್ತರ ವಿದ್ಯಾರ್ಥಿಗಳು ಸಂಶೋಧನಾತ್ಮಕ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಕೃಷಿ ವಿವಿ ನಿವೃತ್ತ ಸಂಶೋಧನಾ ನಿರ್ದೇಶಕ ಡಾ.ಪ್ರಭಾಕರ ಶೆಟ್ಟಿ, ಕೃಷಿ ಸಚಿವಾಲಯದ ವಿಶೇಷ ಕರ್ತವ್ಯಾಕಾರಿ ಡಾ.ಎ.ಬಿ.ಪಾಟೀಲ್, ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯ ಡಿ.ಮಲ್ಲಿಕಾರ್ಜುನ, ವಿವಿಯ ವಿವಿಧ ವಿಭಾಗಗಳ ನಿರ್ದೇಶಕರಾದ ಡಾ.ಗುರುರಾಜ ಸುಂಕದ, ಡಾ.ಬಿ.ಕೆ.ದೇಸಾಯಿ, ಡಾ.ಎಸ್.ಬಿ.ಗೌಡಪ್ಪ, ಕುಲಸಚಿವ ಡಾ.ಎಂ.ವೀರನಗೌಡ, ನಿವೃತ್ತ ಶಿಕ್ಷಣ ನಿರ್ದೇಶಕ ಡಾ.ಎಸ್.ಕೆ.ಮೇಟಿ ಉಪಸ್ಥಿತರಿದ್ದರು.