ಚಾಮರಾಜನಗರ: ಪರಿಶಿಷ್ಟ ಜಾತಿ ರೈತ ಸಂಘದ ಉದ್ಘಾಟನೆ ಸಮಾರಂಭ ಏ.20ರಂದು ತಾಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆಯಲಿದೆ.
ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಶುರುವಾಗುವ ಕಾರ್ಯಕ್ರಮವನ್ನು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಉದ್ಘಾಟಿಸುವರು. ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಅಂಬೇಡ್ಕರ್ ಭಾವಚಿತ್ರಕ್ಕೆ ಸಂಸದ ಸುನೀಲ್‌ಬೋಸ್ ಮಾಲಾರ್ಪಣೆ ಮಾಡುವರು. ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್, ಜಿ.ಪಂ ಮಾಜಿ ಉಪಾಧ್ಯಕ್ಷ ಶಿವಕುಮಾರ್, ಮಾಜಿ ಸದಸ್ಯ ಆರ್.ಬಾಲರಾಜ್, ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಸೋಮೇಶ್ವರ್, ನಗರಸಭೆ ಸದಸ್ಯ ರಾಜಪ್ಪ, ಗ್ರಾಪಂ ಅಧ್ಯಕ್ಷ ನಟರಾಜು, ಉಪಾಧ್ಯಕ್ಷೆ ರಾಜೇಶ್ವರಿ, ದಲಿತ ಮುಖಂಡ ವೆಂಕಟರಮಣಸ್ವಾಮಿ(ಪಾಪು), ತಾಪಂ ಮಾಜಿ ಸದಸ್ಯ ಆರ್.ಮಹದೇವು, ಸಿದ್ದಯ್ಯನಪುರ ಮೂಲ ಕಮಿಟಿ ಅಧ್ಯಕ್ಷ ಮಹದೇವಯ್ಯ ಮತ್ತು ಇತರರು ಪಾಲ್ಗೊಳ್ಳುವರು.